ಹುಬ್ಬಳ್ಳಿ: ನಗರದಲ್ಲಿ ಬೆಳ್ಳಂಬೆಳಗ್ಗೆ ನಿವೃತ್ತ ಪ್ರೊಫೆಸರ್ನನ್ನು ಕೊಲೆಗೈದಿರುವ ಘಟನೆ ಲಿಂಗರಾಜ ನಗರದಲ್ಲಿ ನಡೆದಿದೆ. ಚಾಕುವಿನಿಂದ ಇರಿದು ನಿವೃತ್ತ ಪ್ರೊಫೆಸರ್ ಶಂಕ್ರಪ್ಪ ಮುಶನ್ನವರ ಕೊಲೆ ಮಾಡಲಾಗಿದೆ.
ಶಂಕ್ರಪ್ಪ ಗದಗ ಜಿಲ್ಲೆಯ ಕಾನೂನು ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸಿದ್ದು ಇತ್ತೀಚೆಗೆ ನಿವೃತ್ತಿ ಪಡೆದು ಹುಬ್ಬಳ್ಳಿಯಲ್ಲಿ ನೆಲೆಸಿದ್ದರು ಎಂದು ತಿಳದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವಿದ್ಯಾನಗರ ಠಾಣೆ ಪೊಲೀಸರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಶಂಕ್ರಪ್ಪರ ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.