Breaking News

ತಾಂತ್ರಿಕ ದೋಷದಿಂದ ಚಲಿಸುತ್ತಿದ್ದ ವಾಹನ ಧಗಧಗನೆ ಹೊತ್ತಿ ಉರಿದ‌ ಘಟನೆ

Spread the love

ಹಾವೇರಿ: ತಾಂತ್ರಿಕ ದೋಷದಿಂದ ಚಲಿಸುತ್ತಿದ್ದ ವಾಹನ ಧಗಧಗನೆ ಹೊತ್ತಿ ಉರಿದ‌ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್​ನಲ್ಲಿ ನಡೆದಿದೆ. ರೇವಣಪ್ಪ ಹುಗ್ಗೇರ ಎಂಬುವರಿಗೆ ಸೇರಿದ ಓಮ್ನಿ ನೋಡ ನೋಡ್ತಿದ್ದಂತೆ ಧಗಧಗನೆ ಉರಿದು ಕರಕಲಾಗಿದೆ.

ದಾವಣಗೆರೆ ಜಿಲ್ಲೆಯ ಮಲೇಬೆನ್ನೂರಿನಿಂದ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದಲ್ಲಿ ನಾಲ್ಕು ಜನರು ಪ್ರಯಾಣಿಸುತ್ತಿದ್ದರು. ಹೊಗೆ ಕಾಣಿಸಿಕೊಳ್ತಿದ್ದಂತೆ ನಾಲ್ವರು ವ್ಯಾನ್​ನಿಂದ​ ಕೆಳಗಿಳಿದಿದ್ದಾರೆ. ಅದೃಷ್ಟವಶಾತ್ ಪ್ರಾಣ ಹಾನಿ ಸಂಭವಿಸಿಲ್ಲ. ರಟ್ಟೀಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
      


Spread the love

About Laxminews 24x7

Check Also

ಹಾಸನಾಂಬೆಯ ದರ್ಶನ ಪಡೆದ ಶಿವರಾಜ್ ಕುಮಾರ್, ರಿಷಬ್ ಶೆಟ್ಟಿ ಕುಟುಂಬ

Spread the loveಹಾಸನ: ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಹತ್ತನೇ ದಿನ. ಇಂದೂ ಕೂಡಾ ಭಕ್ತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ