Breaking News

40 ವರ್ಷಗಳ ಬಳಿಕ ಭಾರತೀಯ ಪ್ರಧಾನಿ ಐತಿಹಾಸಿಕ ಭೇಟಿ – ಮುಂದಿನ ವಾರ ನ್ಯೂಜಿಲೆಂಡ್‌ಗೆ ಮೋದಿ ಪ್ರವಾಸ

Spread the love

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ ನ್ಯೂಜಿಲೆಂಡ್‌ಗೆ  ತಮ್ಮ ಮೊದಲ ಅಧಿಕೃತ ದ್ವಿಪಕ್ಷೀಯ ಪ್ರವಾಸ ಕೈಗೊಳ್ಳಲಿದ್ದಾರೆ. ಕಳೆದ 40 ವರ್ಷಗಳಲ್ಲಿ ಭಾರತೀಯ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿ ಆಗಿರುವುದರಿಂದ ಈ ಪ್ರವಾಸಕ್ಕೆ ವಿಶೇಷ ಮಹತ್ವ ಲಭಿಸಿದೆ.

ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್  ಈ ಭೇಟಿ ಕುರಿತು ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಭಾರತ-ನ್ಯೂಜಿಲೆಂಡ್ ಸಂಬಂಧದಲ್ಲಿ ಇದು ಐತಿಹಾಸಿಕ ಘಟ್ಟವಾಗಲಿದೆ. ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ, ವ್ಯಾಪಾರ ಮತ್ತು ಕಾರ್ಯತಂತ್ರದ ಸಹಕಾರವನ್ನ ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಈ ಭೇಟಿ ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಜುಲೈ 10 ರಂದು ನ್ಯೂಜಿಲೆಂಡ್ ತಲುಪಿ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ವ್ಯಾಪಾರ , ಹೂಡಿಕೆ, ಕೃಷಿ, ಆಹಾರ ಸಂಸ್ಕರಣೆ, ನವೀಕರಿಸಬಹುದಾದ ಇಂಧನ, ಶಿಕ್ಷಣ, ತಂತ್ರಜ್ಞಾನ, ರಕ್ಷಣಾ ಸಹಕಾರ ಹಾಗೂ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿನ ಸಹಯೋಗ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆಯಿದೆ. ಅಲ್ಲದೇ ಉಭಯ ದೇಶಗಳ ನಡುವಿನ ಹೊಸ ಒಪ್ಪಂದಗಳು ಹಾಗೂ ಸಹಕಾರದ ಘೋಷಣೆಗಳ ನಿರೀಕ್ಷೆಯೂ ಇದೆ.

ಈ ವರ್ಷದ ಏಪ್ರಿಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮುಕ್ತ ವ್ಯಾಪಾರ ಒಪ್ಪಂದ ಅಂತಿಮಗೊಂಡಿತ್ತು. ಈ ಒಪ್ಪಂದದ ಮೂಲಕ ನ್ಯೂಜಿಲೆಂಡ್‌ನ ಸುಮಾರು 95% ರಫ್ತು ಉತ್ಪನ್ನಗಳ ಮೇಲಿನ ಸುಂಕವನ್ನ ಭಾರತ ಹಂತ ಹಂತವಾಗಿ ತೆಗೆದುಹಾಕಲು ಒಪ್ಪಿಕೊಂಡಿದೆ. ಇದರ ಪರಿಣಾಮವಾಗಿ ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ ಹಾಗೂ ಹೂಡಿಕೆ ಸಂಬಂಧಗಳು ಮತ್ತಷ್ಟು ವಿಸ್ತರಿಸುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಅವರ ಈ ಭೇಟಿ ಆ ಒಪ್ಪಂದದ ಅನುಷ್ಠಾನಕ್ಕೆ ಹೊಸ ವೇಗ ನೀಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಭಾರತೀಯ ಮೂಲದ ಸಮುದಾಯದ ಪ್ರತಿನಿಧಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸುವ ಸಾಧ್ಯತೆಯೂ ಇದೆ. ನ್ಯೂಜಿಲೆಂಡ್‌ನಲ್ಲಿ ಭಾರತೀಯ ಮೂಲದ ಜನಸಂಖ್ಯೆ ಗಣನೀಯ ಪ್ರಮಾಣದಲ್ಲಿದ್ದು, ಉಭಯ ದೇಶಗಳ ಸಾಂಸ್ಕೃತಿಕ ಮತ್ತು ಆರ್ಥಿಕ ಸಂಬಂಧಗಳಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದಾರೆ.

ನ್ಯೂಜಿಲೆಂಡ್ ಪ್ರವಾಸದ ನಂತರ ಪ್ರಧಾನಿ ಮೋದಿ ಅವರು ತಮ್ಮ ವಿದೇಶಿ ಪ್ರವಾಸದ ಮುಂದಿನ ಹಂತವಾಗಿ ಇತರೆ ಇಂಡೋ-ಪೆಸಿಫಿಕ್ ರಾಷ್ಟ್ರಗಳಿಗೂ ಭೇಟಿ ನೀಡುವ ಸಾಧ್ಯತೆ ಇದೆ. ಈ ಪ್ರವಾಸವು ಭಾರತವು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ತನ್ನ ರಾಜತಾಂತ್ರಿಕ ಮತ್ತು ಆರ್ಥಿಕ ಪ್ರಭಾವವನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನದ ಭಾಗವಾಗಿದೆ.


Spread the love

About Laxminews 24x7

Check Also

ಕೋಲಾರದಲ್ಲಿ ಸಮುದಾಯ ಭವನ, ಅಗನವಾಡಿಗಳಲ್ಲೇ ಕುಳಿತು ಮತಪಟ್ಟಿ ಪರಿಷ್ಕರಣೆ!

Spread the loveಕೋಲಾರ: ಚುನಾವಣಾ ಆಯೋಗದ ಮಹತ್ವದ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಕೋಲಾರ ನಗರದಲ್ಲಿ ಭರದಿಂದ ಸಾಗುತ್ತಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ