Breaking News

ಮುಂದಿನ ಮಳೆಗಾಲದಲ್ಲಿ ವೇದಾವತಿ ಕಣಿವೆಯಿಂದ ವಾಣಿ ವಿಲಾಸ ಜಲಾಯಶಕ್ಕೆ ನೀರು : ಸಚಿವ ರಮೇಶ್ ಜಾರಕಿಹೊಳಿ

Spread the love

ಹಾಸನ : ಮುಂದಿನ ಮಳೆಗಾಲದಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ತಾತ್ಕಾಲಿಕವಾಗಿ ನೀರು ಹರಿಸಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ಜಿಲ್ಲೆಯ ಬೇಲೂರು ತಾಲ್ಲೂಕಿನ ಎತ್ತಿನಹೊಳೆ ಯೋಜನಾ ಕಾಮಗಾರಿಯನ್ನು ಶುಕ್ರವಾರ ಪರಿವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯ ಹಂತ-1ರ ಕಾಮಗಾರಿಗಳು ಮತ್ತು ಹಂತ-2ರ 33 ಕಿ.ಮೀ.ವರೆಗಿನ ಗುರುತ್ವಾ ಕಾಲುವೆ ಕಾಮಗಾರಿಗಳನ್ನು ಮೇ ತಿಂಗಳೊಳಗೆ ಪೂರ್ಣಗೊಳಿಸಲಾಗುತ್ತದೆ ಎಂದರು.

ಪ್ರಾಯೋಗಿಕ ನೀರನ್ನು ವೇದಾವತಿ ಕಣಿವೆಯ ಮೂಲಕ ಹರಿಸಲು ಯೋಜನೆಯನ್ನು ರೂಪಿಸಲಾಗಿದೆ. ತುಮಕೂರಿನ ಭೈರಗೊಂಡ್ಲು ಜಲಾಶಯದ ಕಾಮಗಾರಿ ನಡೆಯದೇ ಇರುವುದರಿಂದ ಪ್ರಾಯೋಗಿಕವಾಗಿ ಈ ರೀತಿ ನೀರನ್ನು ಹರಿಸಿ, ಜನರಿಗೆ ವಿಶ್ವಾಸ ಮೂಡಿಸಲಾಗುತ್ತದೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

ಎತ್ತಿನಹೊಳೆ ಯೋಜನೆಗಾಗಿ ಜಮೀನು ಕಳೆದುಕೊಳ್ಳುವ ರೈತರಿಗೆ ಹೊಸ ಭೂಸ್ವಾಧೀನ ಕಾಯ್ದೆ 2013ರ ಪ್ರಕಾರ ಪ್ರಕ್ರಿಯೆಯನ್ನು ಕೈಗೊಂಡಿದೆ. ರೈತರಿಗೆ ಹಣವನ್ನು ಪಾವತಿಸಲು ಕ್ರಮ ವಹಿಸಲಾಗುತ್ತದೆ ಹಾಗೂ ಹಂತ ಹಂತವಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ಕಾಮಗಾರಿಗಳನ್ನು ನಿರ್ವಹಿಸಲಾಗುತ್ತದೆ. ಯೋಜನೆಗೆ ಆರಂಭಿಕ ಮೊತ್ತ 12,912.36 ಕೋಟಿ ರೂ. ನಿಗದಿಗೊಳಿಸಿದ್ದು, ಎರಡೂ ಹಂತಗಳಲ್ಲಿ ಒಟ್ಟು 7013.3 ಕೋಟಿ ರೂ. ವೆಚ್ಚವಾಗಿದೆ ಎಂದು ಹೇಳಿದರು.

ಸಣ್ಣ ನೀರಾವರಿ ಸಚಿವ ಸಿ.ಪಿ. ಯೋಗೇಶ್ವರ್, ಸ್ಥಳೀಯ ಶಾಸಕರು ಜೊತೆಯಲ್ಲಿದ್ದರು


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ