Breaking News

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಹಾಕಿ ದಿಗ್ಗಜ ಪರ್ಗತ್ ಸಿಂಗ್ ನೇಮಕ

Spread the love

ಚಂಡೀಗಢ: ಮಾಜಿ ಒಲಿಂಪಿಯನ್ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ, ಜಲಂಧರ್ ಕಂಟೋನ್ಮೆಂಟ್ ಶಾಸಕ ಪರ್ಗತ್ ಸಿಂಗ್  ಅವರನ್ನು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ  ಅಧ್ಯಕ್ಷರಾಗಿ ಕಾಂಗ್ರೆಸ್ ನೇಮಕ ಮಾಡಿದೆ. ಅಮರಿಂದರ್ ಸಿಂಗ್ ರಾಜಾ ವಾರಿಂಗ್ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ನೇಮಕಾತಿ ನಡೆದಿದೆ.

2027ರ ಪಂಜಾಬ್ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಈ ಮಹತ್ವದ ನಾಯಕತ್ವ ಬದಲಾವಣೆ ನಡೆದಿದೆ. ಪರ್ಗತ್ ಸಿಂಗ್ ಅವರ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಪರ್ಗತ್ ಸಿಂಗ್ ಅವರಿಗೆ ನಿರ್ಗಮಿತ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷರು ಹಾಗೂ ವಿವಿಧ ಚುನಾವಣಾ ಸಮಿತಿಗಳ ಅಧ್ಯಕ್ಷರು ಮತ್ತು ಸಹಾಧ್ಯಕ್ಷರು ತಮ್ಮ ಹುದ್ದೆಗಳಲ್ಲಿ ಮುಂದುವರಿಯಲಿದ್ದಾರೆ ಎಂದು ಪಕ್ಷ ತಿಳಿಸಿದೆ.

ಒಂದು ದಶಕಕ್ಕೂ ಹೆಚ್ಚು ಕಾಲ ರಾಜಕೀಯದಲ್ಲಿ ಸಕ್ರಿಯ:
ಪರ್ಗತ್ ಸಿಂಗ್ ಅವರು ಭಾರತೀಯ ಹಾಕಿ ತಂಡದ ಮಾಜಿ ನಾಯಕ ಹಾಗೂ ಒಲಿಂಪಿಯನ್ ಆಗಿದ್ದು, ಒಂದು ದಶಕಕ್ಕೂ ಹೆಚ್ಚು ಕಾಲ ಪಂಜಾಬ್ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ಅವರು 2012ರಿಂದ ಜಲಂಧರ್ ಕಂಟೋನ್ಮೆಂಟ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

2012ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಶಿರೋಮಣಿ ಅಕಾಲಿದಳದ ಅಭ್ಯರ್ಥಿಯಾಗಿ ಜಲಂಧರ್ ಕಂಟೋನ್ಮೆಂಟ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಗೆಲುವು ಸಾಧಿಸಿದ್ದರು. ನಂತರ 2016ರಲ್ಲಿ ಶಿರೋಮಣಿ ಅಕಾಲಿದಳದಿಂದ ಅಮಾನತುಗೊಂಡ ಬಳಿಕ ಪಕ್ಷದೊಂದಿಗಿನ ಸಂಬಂಧ ಕಡಿದುಕೊಂಡರು. ಬಳಿಕ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ಸೇರಿದಂತೆ ಹಲವು ನಾಯಕರೊಂದಿಗೆ `ಆವಾಝ್-ಇ-ಪಂಜಾಬ್’ ರಂಗದೊಂದಿಗೆ ಅವರು ಗುರುತಿಸಿಕೊಂಡಿದ್ದರು. ನಂತರ ಕಾಂಗ್ರೆಸ್ ಸೇರ್ಪಡೆಯಾದರು.


Spread the love

About Laxminews 24x7

Check Also

ಇಂದು ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ

Spread the loveಬೆಂಗಳೂರು: ಇಂದು ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ ಮಾಡಲಾಗಿದೆ. ಕೊನೆಯ ರೈಲು ಹೊರಡುವ ಸಮಯ ವಿಸ್ತರಣೆಯಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ