Breaking News

ಸ್ವಿಫ್ಟ್‌ ಕಾರು, ಕ್ಯಾಂಟರ್‌ ನಡುವೆ ಭೀಕರ ಅಪಘಾತ – ನಾಲ್ವರು ದುರ್ಮರಣ

Spread the love

ಧಾರವಾಡ: ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಸ್ವಿಫ್ಟ್‌ ಕಾರು, ಕ್ಯಾಂಟರ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಅಜೀತ್, ರಾಕೇಶ್, ಸಂದೀಪ್, ಮತ್ತು ಶೃತಿ ಮೃತ ದುರ್ದೈವಿಗಳು. ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರು, ಕ್ಯಾಂಟರ್‌ಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರೆಲ್ಲ ವಿಜಯಪುರ ಜಿಲ್ಲೆಯವರು ಎಂದು ತಿಳಿದು ಬಂದಿದೆ. ನವಲಗುಂದ ತಾಲೂಕು ಆಸ್ಪತ್ರೆಗೆ ಶವಗಳನ್ನು ರವಾನಿಸಲಾಗಿದೆ. ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ವಿರಾಜಪೇಟೆ | ಹೇರೂರು ಎಸ್ಟೇಟ್ ಬಳಿ ಹುಲಿ ಪ್ರತ್ಯಕ್ಷ – ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಎಚ್ಚರಿಕೆ

Spread the loveಮಡಿಕೇರಿ: ವಿರಾಜಪೇಟೆ  ತಾಲೂಕಿನ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಹುಲಿಯೊಂದು ಕಾಣಿಸಿಕೊಂಡಿದೆ. ಸಿದ್ದಾಪುರ – ಮೈಸೂರು ಮುಖ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ