Breaking News

ಧಾರವಾಡದ ಎನ್.ಟಿ.ಟಿ.ಎಫ್ ಬಳಿ ಭೀಕರ ಅಪಘಾತ: ಡಿವೈಡರ್‌ಗೆ ಬುಲೆಟ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Spread the love

ಧಾರವಾಡದ ಎನ್.ಟಿ.ಟಿ.ಎಫ್ (NTTF) ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬುಲೆಟ್ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಹುಬ್ಬಳ್ಳಿ ಮಾರ್ಗವಾಗಿ ಧಾರವಾಡ ನಗರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬುಲೆಟ್ ಬೈಕ್ ರಸ್ತೆ ಮಧ್ಯದ ಡಿವೈಡರ್‌ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಚಾಲಕ ಹಾಗೂ ಹಿಂಬದಿ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಇಬ್ಬರಿಗೂ ತಲೆ ಹಾಗೂ ಕೈಕಾಲುಗಳಿಗೆ ಬಲವಾದ ಪೆಟ್ಟು ಬಿದ್ದಿದೆ.
ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ವ್ಯವಸ್ಥೆ ಮಾಡಿದ್ದು, ಪ್ರಾಥಮಿಕ ತನಿಖೆಯ ನಂತರವಷ್ಟೇ ಗಾಯಾಳುಗಳ ಹೆಸರು ಮತ್ತು ಹೆಚ್ಚಿನ ವಿವರಗಳು ತಿಳಿದುಬರಬೇಕಿದೆ. ಈ ಕುರಿತು ಧಾರವಾಡ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಸ್ಟ್ರೈಕ್‌ – ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸಂಚಾರ ಸ್ಥಗಿತ?

Spread the loveಬೆಂಗಳೂರು: ಕತ್ರಿಗುಪ್ಪೆಯ ಕಾಮಾಕ್ಯ ಎಲೆಕ್ಟ್ರಿಕಲ್ ಡಿಪೋ 13ರಲ್ಲಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಚಾಲಕರ ಪ್ರತಿಭಟನೆ ನಡೆಸಿದ್ದಾರೆ. ಇದರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ