Breaking News

ನಿರ್ಮಾಣ ಹಂತದ ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಭೀಕರ ಅಪಘಾತ – ನಾಲ್ವರು ಯುವಕರು ದುರ್ಮರಣ

Spread the love

ಯಾದಗಿರಿ: ನಿರ್ಮಾಣ ಹಂತದ ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಯುವಕರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ.

ಯಾದಗಿರಿ ಜಿಲ್ಲೆಯ ಶಹಾಪುರ  ತಾಲೂಕಿನ ಇಬ್ರಾಹಿಂ ಡಿಬಿಎಲ್ ಕ್ಯಾಂಪ್ ಬಳಿಯ ಚೆನ್ನೈ-ಸೂರತ್ ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಶುಕ್ರವಾರ (ನ.6) ರಾತ್ರಿ 11:30ರ ವೇಳೆಗೆ ಈ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಗುರುರಾಜ್ ಚವ್ಹಾಣ್ (35), ರೆಡ್ಡಿ ರಾಠೋಡ್ (33), ಗೋವಿಂದ ಚವ್ಹಾಣ್ (28) ಹಾಗೂ ಕುಮಾರ ರಾಠೋಡ್ (26) ಎಂದು ಗುರುತಿಸಲಾಗಿದೆ.

ಮೃತ ನಾಲ್ವರಲ್ಲಿ ಮೂವರು ಮಲ್ಹಾರ್ ತಾಂಡಾದ ನಿವಾಸಿಗಳಿದ್ದು, ಓರ್ವ ಲಿಂಗೇರಿ ತಾಂಡಾದ ಯುವಕ ಎಂದು ತಿಳಿದುಬಂದಿದೆ. ನಾಲ್ವರು ಯುವಕರು ಕಾರಿನಲ್ಲಿ ಜೇವರ್ಗಿಯಿಂದ ಯಾದಗಿರಿ ಕಡೆಗೆ ಬರುತ್ತಿದ್ದರು. ಈ ವೇಳೆ ವೇಗವಾಗಿ ಬಂದು ರಸ್ತೆ ಪಕ್ಕದ ಗೋಡೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ಸ್ಥಳಕ್ಕೆ ಎಸ್‌ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಮಹಾರಾಜರು ಅರಮನೆ ಕಟ್ಟಿಸಿದ್ದು ಜನರ ತೆರಿಗೆಯ ಹಣದಿಂದಲೇ, ಎಲ್ಲವೂ ಜನರಿಗೇ ಸೇರಬೇಕು: ಯತೀಂದ್ರ ಸಿದ್ದರಾಮಯ್ಯ

Spread the loveಮೈಸೂರು: ಮಹಾರಾಜರು ಅರಮನೆ ಕಟ್ಟಿಸಿದ್ದು ಕೂಡ ಜನರ ತೆರಿಗೆಯ ಹಣದಿಂದಲೇ, ಹೀಗಾಗಿ ಎಲ್ಲವೂ ಜನರಿಗೇ ಸೇರಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ