Breaking News

ಹೆದ್ದಾರಿಯಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್‌ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು

Spread the love

ಮಂಡ್ಯ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ಬಳಿ ನಡೆದಿದೆ.

ಕಬ್ಬಿಣದ ಕಂಬಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್‌ ಅನ್ನು ಕೆಎಸ್‌ಆರ್‌ಟಿಸಿ ಬಸ್ ಓವರ್‌ಟೇಕ್ ಮಾಡಲು ಯತ್ನಿಸಿದಾಗ ಈ ದುರಂತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ಕಬ್ಬಿಣದ ಕಂಬಗಳು ಬಸ್ಸಿನ ಒಳಭಾಗಕ್ಕೆ ನುಗ್ಗಿದ್ದು, ಪರಿಣಾಮವಾಗಿ ಬಸ್ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಅಪಘಾತದಲ್ಲಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಸಮೀಪದ ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೇಸ್‌ ದಾಖಲಾಗಿದೆ.


Spread the love

About Laxminews 24x7

Check Also

ಈ ಬಾರಿ ಮೈಸೂರು ದಸರಾ ಮೆರವಣಿಗೆಯಲ್ಲಿ ನಟ – ನಟಿಯರು ಭಾಗಿ

Spread the loveಮೈಸೂರು: ಈ ಬಾರಿಯ ದಸರಾ ಮೆರವಣಿಗೆಯಲ್ಲಿ  ಕನ್ನಡ ಚಲನಚಿತ್ರ ರಂಗದ ನಟ ನಟಿಯರು  ಭಾಗಿಯಾಗಲಿದ್ದಾರೆ. ಸಿಎಂ ಆಶಯದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ