ಬೆಳಗಾವಿ: ಬುಲೆರೋ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬುಲೆರೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಅಥಣಿ–ತಂಗಡಿ ರಸ್ತೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಅಥಣಿ ಪಟ್ಟಣದ ನಿವಾಸಿ ಶಂಕರ ಪ್ರಕಾಶ ಪೂಜಾರಿ (32) ಮೃತಪಟ್ಟಿದ್ದಾರೆ. ಬುಲೆರೋ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿ ಸಂಭವಿಸಿದ ರಭಸಕ್ಕೆ ಬುಲೆರೋ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನ ಚಲಾಯಿಸುತ್ತಿದ್ದ ಶಂಕರ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Laxmi News 24×7