Breaking News
Home / ಜಿಲ್ಲೆ / ಕೊರೊನಾ ಭಯ : ಹಾಸ್ಟೆಲ್-ಪಿಜಿ ಬಿಟ್ಟು ಮನೆಗಳಿಗೆ ವಾಪಸಾಗುವಂತೆ ಸೂಚನೆ.

ಕೊರೊನಾ ಭಯ : ಹಾಸ್ಟೆಲ್-ಪಿಜಿ ಬಿಟ್ಟು ಮನೆಗಳಿಗೆ ವಾಪಸಾಗುವಂತೆ ಸೂಚನೆ.

Spread the love

ಬೆಂಗಳೂರು, ಮಾ.17- ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸ್ಟೆಲ್ ಮತ್ತು ಪಿಜಿಯಲ್ಲಿರುವವರು ತಮ್ಮ ಮನೆಗಳಿಗೆ ವಾಪಸಾಗುವಂತೆ ಬಿಬಿಎಂಪಿ ಮನವಿ ಮಾಡಿಕೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಹೊರ ಊರಿನಿಂದ ಆಗಮಿಸಿ ನಗರದ ಹಾಸ್ಟೆಲ್ ಮತ್ತು ಪಿಜಿಯಲ್ಲಿ ತಂಗಿರುವವರು ಕೂಡಲೇ ತಮ್ಮ ಊರುಗಳಿಗೆ ಹಿಂದಿರುಗುವಂತೆ ಬಿಬಿಎಂಪಿ ಆಯುಕ್ತ ಅನಿಲ್‍ಕುಮಾರ್ ಮನವಿ ಮಾಡಿಕೊಂಡಿದ್ದಾರೆ.

ಊರಿಗೆ ತೆರಳಲು ಸಾಧ್ಯವಾಗದೆ ಹಾಸ್ಟೆಲ್‍ನಲ್ಲೇ ತಂಗಿರುವ ವಿದ್ಯಾರ್ಥಿಗಳು ವೈಯಕ್ತಿಕ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಅನಿಲ್‍ಕುಮಾರ್ ಸಲಹೆ ನೀಡಿದ್ದಾರೆ.ಹಾಸ್ಟೆಲ್ ಮತ್ತು ಪಿಜಿ ಮಾಲೀಕರು ಸ್ವಚ್ಛತೆಗೆ ಆದ್ಯತೆ ನೀಡುವುದರ ಜತೆಗೆ ವಿದ್ಯಾರ್ಥಿಗಳಿಗೆ ಸ್ಯಾನಿಟೈಜೇಷನ್ ಮತ್ತಿತರ ಸವಲತ್ತುಗಳನ್ನು ಒದಗಿಸಬೇಕು ಎಂದು ಮನವಿ ಮಾಡಿಕೊಳ್ಳಲಾಗಿದೆ.

ಪಿಜಿಗಳಲ್ಲಿ ಉಳಿದುಕೊಂಡಿರುವ ವಿದ್ಯಾರ್ಥಿಗಳು ಅಂತರ ಕಾಯ್ದುಕೊಳ್ಳುವಂತೆ ವಾರ್ಡನ್‍ಗಳು ಎಚ್ಚರಿಕೆ ವಹಿಸಬೇಕು. ಅಚಾತುರ್ಯದಿಂದ ಪಿಜಿ ಮತ್ತು ಹಾಸ್ಟೆಲ್ ನಿವಾಸಿಗಳಿಗೆ ಕೊರೊನಾ ಸೋಂಕು ತಗುಲಿದರೆ ಸಂಬಂಧಪಟ್ಟವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅನಿಲ್‍ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಅದೇ ರೀತಿ ಪಾರ್ಕ್‍ಗಳಲ್ಲಿರುವ ಜಿಮ್ ಸಲಕರಣೆಗಳನ್ನು ಉಪಯೋಗಿಸದಂತೆಯೂ ಎಚ್ಚರಿಕೆ ವಹಿಸಬೇಕು. ಪಾರ್ಕ್‍ಗಳಲ್ಲಿ ಜನ ಒಗ್ಗೂಡಬಾರದು. ಜನವಸತಿ ಪ್ರದೇಶ, ಅಪಾರ್ಟ್‍ಮೆಂಟ್‍ಗಳಲ್ಲಿ, ರೆಸಿಡೆನ್ಷಿಯಲ್ ಅಸೋಸಿಯೇಷನ್ ಪದಾಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆಯೂ ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಸಾರ್ವಜನಿಕ ಆಸ್ತಿ ಮಾರಿದ್ದೇ ಮೋದಿ ಸಾಧನೆ: ಖರ್ಗೆ ಟೀಕೆ

Spread the love ನವದೆಹಲಿ: ‘ದೇಶದಲ್ಲಿನ ಸಾರ್ವಜನಿಕ ಆಸ್ತಿಗಳನ್ನು ತನ್ನ ಬಂಡವಾಳಶಾಹಿ ಸ್ನೇಹಿತರಿಗೆ ಅತಿ ಕಡಿಮೆ ಬೆಲೆಗೆ ಮಾರಾಟ ಮಾಡಿರುವುದೇ ಪ್ರಧಾನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ