Breaking News

ಮನೆಯ ಬೀಗ ಮುರಿದು ಕಳ್ಳತನ – 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನ, ಬೆಳ್ಳಿ ದೋಚಿ ಪರಾರಿ

Spread the love

ಬೀದರ್: ಎಲ್ಲರೂ ಮದುವೆಗೆ ಹೋಗಿದ್ದಾಗ ಮನೆಯ ಬೀಗ ಮುರಿದು 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ಲಕ್ಷಾಂತರ ಮೌಲ್ಯದ ಬೆಳ್ಳಿ ಆಭರಣಗಳು, 1.50 ಲಕ್ಷ ನಗದು ದೋಚಿ  ಕಳ್ಳರು ಪರಾರಿಯಾದ ಘಟನೆ ಬೀದರ್  ತಾಲೂಕಿನ ಚಿದ್ರಿ ಗ್ರಾಮದಲ್ಲಿ ನಡೆದಿದೆ.

150 ಗ್ರಾಂ ಚಿನ್ನದ ಆಭರಣಗಳು, 100 ಗ್ರಾಂ ಬೆಳ್ಳಿ ಆಭರಣಗಳು ಮತ್ತು 1.50 ಲಕ್ಷ ನಗದು ದೋಚಿ ಖದೀಮರು ಪರಾರಿಯಾಗಿದ್ದಾರೆ. ಮನೆಯವರು ಎಲ್ಲರೂ ಸಂಬಂಧಿಕರ ಮದುವೆ ಸಮಾರಂಭಕ್ಕೆ ಹೋಗಿದ್ದಾಗ ರಾಜಕುಮಾರ ಬಿರಾದರ್ ಚಿದ್ರಿ ಎಂಬವರ ಮನೆಯ ಬೀಗ ಮತ್ತು ಅಲಮರಿ ಬೀಗ ಮುರಿದು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಮಧ್ಯಾಹ್ನ ಮದುವೆ ಸಮಾರಂಭಕ್ಕೆ ಹೋಗಿ ರಾತ್ರಿ ಮನೆಗೆ ಬಂದಾಗ ಕಳ್ಳತನವಾಗಿದ್ದು ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದೆ. ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ, ಗಾಂಧಿಗಂಜ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ