Breaking News

ವಾಟಾಳ್ ಕರೆ ನೀಡಿದ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ

Spread the love

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕನ್ನಡ ವಾಟಾಳ್ ನಾಗರಾಜ್  ನೇತೃತ್ವದಲ್ಲಿ ಕರೆ ನೀಡಲಾಗಿರುವ ಕರ್ನಾಟಕ ಬಂದ್‌ ತಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

ಬಂದ್‌ನಿಂದ ಸಾರ್ವಜನಿಕರಿಗೆ ತೊಂದರೆಯೇ ಹೆಚ್ಚು. ಹೀಗಾಗಿ ಈಗಿನ ಪರಿಸ್ಥಿತಿಯಲ್ಲಿ ಬಂದ್ ನಡೆಸುವುದು ಬೇಡ., ಅದರ ಬದಲು ವಿಭಿನ್ನ ರೀತಿಯಲ್ಲಿ ಹೋರಾಟ ಮಾಡೋಣ ಎಂದು ವಾಟಾಳ್ ನಾಗರಾಜ್ ಅವರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಜಲಾಶಯಗಳಲ್ಲಿ ನೀರಿಲ್ಲದ ಸಮಯದಲ್ಲಿ ತಮಿಳುನಾಡಿಗೆನೀರು ಹರಿಸುವಂತೆ ಬಂದ ಆದೇಶವನ್ನು ಖಂಡಿಸಿ ಆ.13 ರಂದು ಬಂದ್‌ ಕರೆ ನೀಡಿದ್ದೆವು. ಆದರೆ ಮುಖ್ಯಮಂತ್ರಿಗಳು ಹಾಗೂ ಸಚಿವರು ಈ ಬಗ್ಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಕನ್ನಡಿಗರಿಗೆ ಪದೇ ಪದೇ ಅನ್ಯಾಯವಾಗುತ್ತಿದೆ. ಈ ವಿಚಾರದಲ್ಲಿ ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಬೇಕು ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕಕ್ಕೆ ಸೂಕ್ತ ನ್ಯಾಯ ಸಿಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಿಎಂ ಒತ್ತಡದ ಆರೋಪ ತಳ್ಳಿಹಾಕಿದ ಅವರು, ಸರ್ಕಾರ ಅಥವಾ ಮುಖ್ಯಮಂತ್ರಿಗಳ ಕಡೆಯಿಂದ ಯಾವುದೇ ಒತ್ತಡ ಬಂದಿಲ್ಲ. ನಾವು ಯಾರ ಮನೆಗೂ ಫಂಡ್ ಕೇಳಲು ಹೋಗುವುದಿಲ್ಲ, ನಮಗೆ ಯಾರ ಭಯವೂ ಇಲ್ಲ. ಮಳೆಯಾಗುತ್ತಿರುವ ಪರಿಸ್ಥಿತಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಬಂದ್ ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಪ್ರವೀಣ್ ಶೆಟ್ಟಿ ತಿಳಿಸಿದರು.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ