Breaking News

ವರದಕ್ಷಿಣೆ ಕಿರುಕುಳ, ಮಕ್ಕಳಾಗಿಲ್ಲವೆಂಬ ಬೇಸರಕ್ಕೆ ಗೃಹಿಣಿ ನೇಣಿಗೆ ಶರಣು

Spread the love

ಬೆಂಗಳೂರು: ವರದಕ್ಷಿಣೆ ಕಿರುಕುಳ ಹಾಗೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಆಗಾಗ ಕೌಟುಂಬಿಕ ಕಲಹ ನಡೆಯುತ್ತಿದ್ದ ಹಿನ್ನೆಲೆ 25 ವರ್ಷದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೊರೆನಾಗಸಂದ್ರ ಗ್ರಾಮದಲ್ಲಿ ನಡೆದಿದೆ.

25 ವರ್ಷದ ಕಾವ್ಯ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮೂಲತಃ ತುಮಕೂರು ಜಿಲ್ಲೆಯ ಕೊರಟಗೆರೆ ನಿವಾಸಿಯಾಗಿದ್ದ ಕಾವ್ಯ, ಮದುವೆಯಾದ ಬಳಿಕ ಪತಿ ನವೀನ್ ಜೊತೆ ನೆಲಮಂಗಲದ ಸಮೀಪದ ಸೊಂಡೆಕೊಪ್ಪದಲ್ಲಿ ವಾಸವಾಗಿದ್ದಳು. ಮೂರು ವರ್ಷಗಳ ಹಿಂದೆ ಕುಟುಂಬದವರ ಒಪ್ಪಿಗೆಯೊಂದಿಗೆ ಇವರ ಮದುವೆ ನಡೆದಿತ್ತು.

ಮದುವೆಯಾಗಿ ಮೂರು ವರ್ಷವಾದರೂ ಮಕ್ಕಳಾಗದ ಕಾರಣ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ವಿಚಾರಕ್ಕೆ ಮನನೊಂದ ಕಾವ್ಯ, ತಡರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಶವಾಗಾರಕ್ಕೆ ರವಾನಿಸಲಾಗಿದೆ.

ಕಾವ್ಯ ಪೋಷಕರು ಪತಿ ನವೀನ್ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿದ್ದ ಆರೋಪ ಮಾಡಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ದಿಲ್ಲಿಯಲ್ಲಿ ಬಿಡಾರ ಹೂಡಿರುವ ಶಾಸಕರನ್ನ ಹೈಕಮಾಂಡ್ ಮರಳಿ ರಾಜ್ಯಕ್ಕೆ ಕಳಿಸಬೇಕು: ಯತ್ನಾಳ್

Spread the loveವಿಜಯಪುರ: ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಿಡಾರ ಹೂಡಿರುವವರನ್ನ ಕಾಂಗ್ರೆಸ್‌ ಹೈಕಮಾಂಡ್‌ ಮರಳಿ ರಾಜ್ಯಕ್ಕೆ ಕಳುಹಿಸಬೇಕು ಎಂದು ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ