Breaking News

ಲವ್ವರ್‌ ಕರೆ ಮಾಡದ್ದಕ್ಕೆ ವಿಡಿಯೋ ಮಾಡ್ಕೊಂಡು ನೇಣಿಗೆ ಕೊರಳೊಡ್ಡಿದ ಗೃಹಿಣಿ

Spread the love

ಬಾಗಲಕೋಟೆ: ಪ್ರಿಯಕರ ಕರೆ ಮಾಡದೇ ಇದ್ದಿದ್ದಕ್ಕೆ ಹಾಗೂ ಕರೆ ಮಾಡಿದ್ರೂ ಸ್ವೀಕರಿಸದೇ ಇದ್ದಿದ್ದಕ್ಕೆ ಮನನೊಂದು ಎರಡು ಮಕ್ಕಳ ತಾಯಿಯೊಬ್ಬಳು ನೇಣಿಗೆ ಶರಣಾದ ಘಟನೆ ಬಾಗಲಕೋಟೆಯ ಬಾಂಬೆ ಕಾಲೋನಿಯಲ್ಲಿ ನಡೆದಿದೆ.

ಮೆಹಬೂಬ್ ಬಿ (27) ನೇಣಿಗೆ ಶರಣಾದ ಮಹಿಳೆ. ಆತ್ಮಹತ್ಯೆಗೂ ಮುನ್ನ, ನೇಣು ಬಿಗಿದುಕೊಳ್ಳುವುದನ್ನು ವಿಡಿಯೋ ಮಾಡಿ, ಪ್ರಿಯಕರನಿಗೆ ಕಳಿಸಿದ್ದಾಳೆ. ಅಲ್ಲದೇ ಫೋನ್ ಮಾಡದೆ ಇದ್ದರೆ ನೇಣು ಹಾಕಿಕೊಂಡು ಸಾಯುತ್ತೇನೆ. ನಿನಗೂ ಹಾಗೂ ಎಲ್ಲರಿಗೂ ವಿಡಿಯೋ ಕಳಿಸುತ್ತೇನೆ. ನಿನ್ನ ಹೆಸರು ಬರೆದಿಟ್ಟು ಸಾಯುತ್ತೇನೆ ಎಂದು ಅಡಿಯೊ ಮೆಸೇಜ್ ಕೂಡ ಮಾಡಿದ್ದಳು.

ಮಹಿಳೆ ಯುವಕನೊಬ್ಬನ ಜೊತೆ ಸಂಬಂಧ ಹೊಂದಿದ್ದಳು. ಕೆಲ ದಿನಗಳಿಂದ ಪ್ರಿಯಕರ ಕರೆ ಮಾಡುತ್ತಿರಲಿಲ್ಲ. ಕರೆ ಮಾಡಿದರೂ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸ್ಥಳಕ್ಕೆ ಬಾಗಲಕೋಟೆಯ ನವನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರಿಯತಮೆ ದೂರವಾದ್ಲು ಅಂತಾ ರೊಚ್ಚಿಗೆದ್ದ ಪಾಗಲ್ ಪ್ರೇಮಿ – ಲವರ್ ಬಾವನ ಬೈಕ್‌ಗೆ ಬೆಂಕಿ ಹಚ್ಚಿ ವಿಕೃತಿ!

Spread the loveಬೆಂಗಳೂರು: ಸೋಷಿಯಲ್ ಮಿಡೀಯಾದಲ್ಲಿ ಶುರುವಾದ ಪರಿಚಯ ಪ್ರೀತಿಗೆ ತಿರುಗಿತ್ತು. ಆದರೆ ಆ ಪ್ರೀತಿಗೆ ಹೆಚ್ಚು ದಿನ ಬಾಳಲಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ