Breaking News

ಗಣೇಶೋತ್ಸವ: ಮಾರ್ಗಸೂಚಿ ಪಾಲನೆ ಕಡ್ಡಾಯ

Spread the love

ಹರಿಹರ: ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ನಗರಸಭೆ ಪೌರಾಯುಕ್ತೆ ಎಸ್‌.ಲಕ್ಷ್ಮಿ ತಿಳಿಸಿದ್ದಾರೆ.

ದೇವಸ್ಥಾನ, ಮನೆ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬವನ್ನು 20 ಜನರ ಸಂಖ್ಯೆ ಮೀರದಂತೆ ಆಚರಿಸಬೇಕು. ಸಾರ್ವಜನಿಕ ಸ್ಥಳದ ಮೂರ್ತಿ 4 ಅಡಿ, ಮನೆಗಳಲ್ಲಿ 2 ಅಡಿ ಅಳತೆ ಮೀರಬಾರದು. ನಗರಸಭೆಯಿಂದ ಪೂರ್ವಾನುಮತಿ ಪಡೆಯಬೇಕು. ವಾರ್ಡ್‌ಗೆ ಅಥವಾ ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು. ಮೆರವಣಿಗೆ ಸೇರಿದಂತೆ ಸಾಂಸ್ಕೃತಿಕ, ಸಂಗೀತ, ನೃತ್ಯ ಇತರೆ ಮನರಂಜನಾ ಕಾರ್ಯಕ್ಕೆ ಅವಕಾಶವಿಲ್ಲ. ಪಿಒಪಿ ಮೂರ್ತಿ ನಿಷೇಧಿಸಿದೆ. ಮನೆಗಳಲ್ಲಿ ಸ್ಥಾಪಿತ ಮೂರ್ತಿಗಳನ್ನು ಮನೆಗಳಲ್ಲಿ, ಸಾರ್ವಜನಿಕ ಮೂರ್ತಿಗಳನ್ನು ಅತಿ ಸಮೀಪದ ನಿಗದಿತ ಹೊಂಡ, ಮೊಬೈಲ್‌ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು.

ಮೂರ್ತಿ ಸ್ಥಾಪಿತ ದೇವಸ್ಥಾನ, ಸಾರ್ವಜನಿಕ ಸ್ಥಳದಲ್ಲಿ ನಿತ್ಯ ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ಯಾನಿಂಗ್‌, ಮಾಸ್ಕ್ ಧಾರಣೆ, 6 ಅಡಿ ಅಂತರ ಕಾಪಾಡಬೇಕು. ತಪ್ಪಿದರೆ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.

ಪಿಒಪಿ ಮೂರ್ತಿ ಮಾರಾಟ ಬೇಡ : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಗಣೇಶ ಮೂರ್ತಿ ತಯಾರಕರು ಹಾಗೂ ಸಾರ್ವಜನಿಕರಿಗೆ ಕೆಲ ಸೂಚನೆ ನೀಡಿದೆ. ಗಣೇಶ ಮೂರ್ತಿಗಳನ್ನು ಜೇಡಿಮಣ್ಣಿನಿಂದ ತಯಾರಿಸಿ, ಬಣ್ಣರಹಿತ ಅಥವಾ ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಮಾತ್ರ ಮಾರಾಟ ಮಾಡುವುದು. ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ಗಣೇಶ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡುವವರ ವಿರುದ್ಧ ಮಹಾನಗರಪಾಲಿಕೆ ಕಾಯ್ದೆ ಕಾನೂನು ಕ್ರಮ ಕೈಗೊಳ್ಳಲಿದೆ. ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು 10,000ರೂ. ದಂಡ ವಿಧಿಸಲಾಗುವುದು. ಆದ್ದರಿಂದ ಯಾವುದೇ ಕಾರಣಕ್ಕೂ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ಗಣೇಶ ಮೂರ್ತಿಗಳನ್ನು ತಯಾರಿಸಿ ಮಾರಾಟ ಮಾಡಬಾರದು ಎಂದು ಮಹಾನಗರ ಪಾಲಿಕೆ ಸೂಚಿಸಿದೆ. ಸಾರ್ವಜನಿಕರು ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳನ್ನು ಖರೀದಿಸಬಾರದು


Spread the love

About Laxminews 24x7

Check Also

ಗುಲ್ಬರ್ಗಾ ವಿವಿ ಅತಿ ಹಿಂದುಳಿದ ವಿಶ್ವವಿದ್ಯಾಲಯ ಆಗಿದೆ : ಮಲ್ಲಿಕಾರ್ಜುನ್​ ಖರ್ಗೆ

Spread the loveಕಲಬುರಗಿ : ಜಿಲ್ಲೆಯಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಲಬುರಗಿ ಬೆಂಗಳೂರಿನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ