Breaking News

https://laxminews24x7.com/minister-satish-jarkiholi-visits-various-areas-to-assess-the-drought-situation/

Spread the love

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 
ಕರಾವಳಿಯ ವಿವಿಧ ಪ್ರದೇಶಗಳಲ್ಲಿ ಭಾನುವಾರ ಮಳೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆ.17ರಿಂದ 23ವರೆಗೆ ಭಾರಿ ಮಳೆ ಬೀಳಲಿದೆ. ಬೆಂಗಳೂರು ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಬಾಗಲಕೋಟೆ, ರಾಯಚೂರು, ವಿಜಯಪುರ ಮತ್ತು ಬಳ್ಳಾರಿ ಸೇರಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಆ.19ರಿಂದ ನಾಲ್ಕೈದು ದಿನ ತುಂತುರು ಮಳೆ ನಿರೀಕ್ಷೆ ಇದೆ.
ಬೆಂಗಳೂರು ನಗರದಲ್ಲಿ ಮುಂದಿನ 5 ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಈ ವೇಳೆ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಪ್ರಮಾಣದ ಮಳೆ ಸುರಿಯಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿ.ಸೆ. ಮತ್ತು 21 ಡಿ.ಸೆ. ದಾಖಲಾಗಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.
ಶೀಘ್ರವೇ ಟಿಬಿ ಡ್ಯಾಂಭರ್ತಿ: 
ಮಲೆನಾಡು ಜಿಲ್ಲೆಗಳಲ್ಲಿ ಮಳೆ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯ ಭರ್ತಿಯಾಗಲು ಮೂರು ಅಡಿ ಮಾತ್ರ ಬಾಕಿಯಿವೆ. 105.788 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 92.350 ಟಿಎಂಸಿ ನೀರು ಸಂಗ್ರಹಗೊಂಡಿದೆ. ಜಲಾಶಯದ ಗರಿಷ್ಠ ಮಟ್ಟ 1633 ಅಡಿಯಾಗಿದ್ದು, ಪ್ರಸ್ತುತ 1629.54 ಅಡಿಗೆ ತಲುಪಿದೆ. ಜಲಾಶಯಕ್ಕೆ 18,550 ಕ್ಯೂಸೆಕ್ ಒಳಹರಿವು ಬರುತ್ತಿದ್ದು, ನಾಲೆಗಳಿಗೆ 6,785 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.

Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ