Breaking News

ಹುಬ್ಬಳ್ಳಿ-ಧಾರವಾಡ ಪಾಲಿಕೆ ಬಜೆಟ್ ಮಂಡನೆ: ₹16,03,26 ಕೋಟಿ ಘೋಷಣೆ

Spread the love

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 2026-27ನೇ ಸಾಲಿನ ಬಜೆಟ್ ಅನ್ನು ಇಂದು ಮೇಯರ್ ಜ್ಯೋತಿ ಪಾಟೀಲ್ ಮಂಡಿಸಿದ್ದು, ಒಟ್ಟು ₹16,03,26 ಕೋಟಿ ಮೊತ್ತದ ಬಜೆಟ್ ಘೋಷಿಸಲಾಗಿದೆ. ಈ ಬಜೆಟ್ ಅವಳಿ ನಗರದ ಜನತೆಗೆ ಯಾವುದೇ ಹೆಚ್ಚುವರಿ ಹೊರೆಯಾಗದಂತೆ ರೂಪಿಸಲಾಗಿದೆ ಎಂದು ಮೇಯರ್ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಜ್ಯೋತಿ ಪಾಟೀಲ್, ಈ ಬಾರಿ ದೊಡ್ಡ ಗಾತ್ರದ ಹಾಗೂ ಅಭಿವೃದ್ಧಿ ಕೇಂದ್ರೀಕೃತ ಬಜೆಟ್ ಮಂಡಿಸಲಾಗಿದೆ ಎಂದು ಹೇಳಿದರು. ನಗರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಸುಧಾರಣೆ, ಮಹಿಳಾ ಸಬಲೀಕರಣ ಸೇರಿದಂತೆ ಹಲವು ಯೋಜನೆಗಳಿಗೆ ವಿಶೇಷ ಒತ್ತು ನೀಡಲಾಗಿದೆ.

ಪಾಲಿಕೆಯ 82 ವಾರ್ಡ್‌ಗಳಲ್ಲಿ ಮಹಿಳೆಯರ ಸ್ವಾವಲಂಬನೆಗಾಗಿ ಪಿಂಕ್ ಆಟೋ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ. ಜೊತೆಗೆ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಅಭ್ಯಾಸ ಮಾಡಿ ಹೆಚ್ಚು ಅಂಕಗಳನ್ನು ಪಡೆಯುವ ವಿದ್ಯಾರ್ಥಿನಿಯರಿಗೆ ₹25,000 ಪ್ರೋತ್ಸಾಹ ಧನ ನೀಡುವ ಯೋಜನೆಯನ್ನೂ ಘೋಷಿಸಲಾಗಿದೆ.

ನಗರದ ಮೂಲಸೌಕರ್ಯ ಅಭಿವೃದ್ಧಿ, ಕುಡಿಯುವ ನೀರು, ಮಹಿಳಾ ಸಬಲೀಕರಣ ಮತ್ತು ಶಿಕ್ಷಣಕ್ಕೆ ಒತ್ತು ನೀಡುವ ಹಲವು ಕಾರ್ಯಕ್ರಮಗಳನ್ನು ಒಳಗೊಂಡಂತೆ ಬಜೆಟ್ ರೂಪಿಸಲಾಗಿದೆ ಎಂದು ಮೇಯರ್ ಮಾಹಿತಿ ನೀಡಿದರು.


Spread the love

About Laxminews 24x7

Check Also

ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ್‌ ಲಾಡ್-ಎಂಎಲ್​ಸಿ ಎಫ್.ಎಚ್.ಜಕ್ಕಪ್ಪನವರ ನಡುವೆ ವಾಗ್ವಾದ

Spread the loveಧಾರವಾಡ : ಧಾರವಾಡದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್​ ಲಾಡ್ ನೇತೃತ್ವದಲ್ಲಿ ಮೂರನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ