Breaking News

ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಒಲೆ ಹೊತ್ತಿಸಿ ಪ್ರತಿಭಟನೆ.

Spread the love

ಬೆಲೆ ಏರಿಕೆ ವಿರೋಧಿಸಿ ಒಲೆ ಹೊತ್ತಿಸಿ ಪ್ರತಿಭಟನೆ.

ಗ್ಯಾಸ್‌ ಸಿಲಿಂಡರ್‌ ಸೇರಿದಂತೆ ದೈನಂದಿನ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಹು-ಧಾ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಒಲೆ ಹತ್ತಿ ಅಡುಗೆ ಮಾಡುವ ಮೂಲಕ ಪ್ರತಿಭಟನೆ ಮಾಡಿದರು.

ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ದೀಪಾ ನಾಗರಾಜ್ ಗೌರಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬದನೆಕಾಯಿ, ಉಳ್ಳಾಗಡ್ಡಿ, ಟೊಮ್ಯಾಟೊ ಸೇರಿದಂತೆ ಇತರ ತರಕಾರಿಗಳಿಂದ ಅಡುಗೆ ಮಾಡಿ, ತಟ್ಟೆಗಳನ್ನು ಬಾರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಕಾಕಿದರು.

ಕೇಂದ್ರ ಬಿಜೆಪಿ ಸರಕಾರವು ಹೊಸ ವರ್ಷಕ್ಕೆ ದೇಶದ ಬಡವರಿಗೆ, ರೈತರಿಗೆ, ಮಹಿಳೆಯರಿಗೆ, ಪೆಟ್ರೋಲ್, ಡಿಸೇಲ್ , ಗ್ಯಾಸ್‌ ಸಿಲಿಂಡರ್‌ ಬೆಲೆ ಏರಿಕೆ ಮಾಡಿ ಜನರಿಗೆ ಬೆಲೆ ಬಿಸಿ ಕೊಡುಗೆ ಕೊಟ್ಟಿದ್ದು, ಕೂಡಲೇ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಂಡು ಜನಸಾಮಾನ್ಯರ ಹೊರೆ ತಗ್ಗಿಸಬೇಕು ಎಂದು ಒತ್ತಾಯಿಸಿರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ