Home / ಜಿಲ್ಲೆ / ಹುಬ್ಬಳ್ಳಿ ಕೊರೊನಾ ಸೋಂಕಿತನ ಟ್ರಾವೆಲ್ ಹಿಸ್ಟರಿ ……

ಹುಬ್ಬಳ್ಳಿ ಕೊರೊನಾ ಸೋಂಕಿತನ ಟ್ರಾವೆಲ್ ಹಿಸ್ಟರಿ ……

Spread the love

ಹುಬ್ಬಳ್ಳಿ: ಹುಬ್ಬಳ್ಳಿಯ ಮುಲ್ಲಾ ಓಣಿಯ ಕೊರೊನಾ ಸೋಂಕಿತನ ಅಣ್ಣ ರೋಗಿ ನಂಬರ್-236 ಟ್ರಾವೆಲ್ ಹಿಸ್ಟರಿಯನ್ನು ಜಿಲ್ಲಾಡಳಿತ ಬಿಡುಗಡೆಗೊಳಿಸಿದ್ದು, ಸಂಪರ್ಕದಲ್ಲಿರುವವರು ಕೂಡಲೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಜಿಲ್ಲಾಡಳಿತ ಮನವಿ ಮಾಡಿದೆ.

ಪಿ.194ನ ಅಣ್ಣ ಪಿ-236 ಇಡೀ ಹುಬ್ಬಳ್ಳಿ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಸುತ್ತಾಡಿದ್ದಾನೆ. ಮಾರ್ಚ್ 23ರಂದು ವಾಹನ ಚಾಲಕನ ಸಮೇತ ಯಲ್ಲಾಪುರಕ್ಕೆ ಪ್ರಯಾಣ ಬೆಳೆಸಿ, ಅಲ್ಲಿಂದ ತನ್ನ ಫುಟ್ ವೇರ್ ಅಂಗಡಿ ಓಪನ್ ಮಾಡಿದ್ದಾನೆ.

ಅಂದೇ ಭಾರತ ಲಾಕ್‍ಡೌನ್ ಮೊದಲ ದಿನವಾದ್ದರಿಂದ ವ್ಯಾಪಾರ ನಡೆಸಿದ್ದ. ವ್ಯಾಪಾರ ಮುಗಿಸಿ ಎಲ್‍ಐಸಿ ಕಚೇರಿಗೆ ತೆರಳಿ ಪ್ರೀಮಿಯಂ ಭರ್ತಿ ಮಾಡಿದ್ದಾನೆ. ಅಲ್ಲಿಂದ ರಾತ್ರಿ 8 ಗಂಟೆಗೆ ಹುಬ್ಬಳ್ಳಿಗೆ ಪ್ರಯಾಣ ಮಾಡಿದ್ದಾನೆ. ಮಾರ್ಚ್ 24ರಂದು ಬೆಳಗ್ಗೆ ಹುಬ್ಬಳ್ಳಿಯ ವಿವಿಧ ಪ್ರದೇಶಗಳಲ್ಲಿ ಪ್ರಯಾಣ ಮಾಡಿದ್ದಾನೆ. ಹಳೇ ಹುಬ್ಬಳ್ಳಿಯಲ್ಲಿ ದಿನಸಿ, ಹಣ್ಣು, ಕಿರಾಣಿ ಸಾಮಾನು ಖರೀದಿಸಿ ಬಳಿಕ ಇಂಡಿಪಂಪ್, ಕೇಶ್ವಾಪುರ, ದುರ್ಗದಬೈಲ್ ಮಾರ್ಕೆಟ್ ಪ್ರದೇಶದಲ್ಲಿ ವಿವಿಧ ವಸ್ತುಗಳ ಖರೀದಿಗೆ ಸುತ್ತಾಡಿದ್ದಾನೆ.

ಹೀಗಾಗಿ ಈತನ ಸಂಪರ್ಕದಲ್ಲಿರುವವರು ಹತ್ತಿರ ಆಸ್ಪತ್ರೆ ಅಥವಾ ಕಿಮ್ಸ್ ಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಲು ಜಿಲ್ಲಾಡಳಿತ ಮನವಿ ಮಾಡಿದೆ. ಈತನು ಸಂಚರಿಸಿರುವ ಸಂದರ್ಭದಲ್ಲಿ ಮಾಸ್ಕ್ ಧರಿಸಿದ್ದ ಎಂಬುವುದು ಕೊಂಚ ನಿರಾಳತೆಯನ್ನು ತಂದುಕೊಟ್ಟಿದೆ. ಆದರೆ ಕೂಡಲೇ ಮುಂಜಾಗ್ರತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ