Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಟೈರ್ ಟ್ಯೂಬ್‍ನಲ್ಲಿ ಸಾಗಿಸುತ್ತಿದ್ದ 300 ಲೀಟರ್ ಕಳ್ಳಭಟ್ಟಿ ವಶ…..

ಟೈರ್ ಟ್ಯೂಬ್‍ನಲ್ಲಿ ಸಾಗಿಸುತ್ತಿದ್ದ 300 ಲೀಟರ್ ಕಳ್ಳಭಟ್ಟಿ ವಶ…..

Spread the love

ಚಿಕ್ಕೋಡಿ (ಬೆಳಗಾವಿ): ಟೈರ್ ಟ್ಯೂಬ್‍ನಲ್ಲಿ ಸಾಗಿಸುತ್ತಿದ್ದ 300 ಲೀಟರ್ ಕಳ್ಳಭಟ್ಟಿಯನ್ನು ಹುಕ್ಕೇರಿ ತಾಲೂಕಿನ ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕೊರೊನಾ ವೈರಸ್ ಹರಡದಂತೆ ತಡೆದಲು ಕೇಂದ್ರ ಸರ್ಕಾರವು ದೇಶಾದ್ಯಂತ ಮೇ 3ರವರೆಗೂ ಲಾಕ್‍ಡೌನ್ ಘೋಷಿಸಿದೆ. ಇದರಿಂದಾಗಿ ಮದ್ಯ ಮಾರಾಟ ಬಂದ್ ಆಗಿದ್ದು, ಎಣ್ಣೆ ಪ್ರಿಯರು ಪರದಾಡುತ್ತಿದ್ದಾರೆ. ಆದರೆ ಜಿಲ್ಲೆಯಲ್ಲಿ ಕಳ್ಳಭಟ್ಟಿ ದಂಧೆಕೋರರು ಮತ್ತೆ ಹೆಡೆ ಬಿಚ್ಚುತ್ತಿದ್ದು, ದಿನದಿಂದ ದಿನಕ್ಕೆ ಕಳ್ಳಭಟ್ಟಿ ತಯಾರಿಕೆ ಹೆಚ್ಚುತ್ತಲೇ ಇದೆ. ಇದರಿಂದಾಗಿ ಹುಕ್ಕೇರಿ ತಾಲೂಕಿನ ಅಬಕಾರಿ ಪೊಲೀಸರು ಕಳ್ಳ ಭಟ್ಟಿ ದಂಧೆಕೋರರ ಮೇಲೆ ದಾಳಿ ನಡೆಸಿ ಒಂದೇ ದಿನ ಯಮಕನಮರಡಿ ಹಾಗೂ ಹುಕ್ಕೇರಿ ಮತಕ್ಷೇತ್ರದಲ್ಲಿ 300 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆದುಕೊಡಿದ್ದಾರೆ.

ಪ್ರತ್ಯೇಕ ಸ್ಥಳಗಳಲ್ಲಿ ಇಂದು ಪೊಲೀಸರು ದಾಳಿ ನಡೆಸಿ, ಕಳ್ಳಭಟ್ಟಿಯನ್ನ ವಶಕ್ಕೆ ಪಡೆದಿದ್ದಾರೆ. ಆದರೆ ಆರೋಪಿ ಬರುವ ಮಾಹಿತಿ ತಿಳಿದು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳಿಗೆ ಬಲೆ ಬೀಸಿದೆ.

ಲಾಕ್‍ಡೌನ್ ಆದಾಗಿನಿಂದ ಈವರೆಗೂ ಹುಕ್ಕೇರಿ ಅಬಕಾರಿ ಠಾಣೆಯ ಅಧಿಕಾರಿಗಳು 13 ಪ್ರಕರಣಗಳಲ್ಲಿ 5 ಜನರನ್ನು ಬಂಧಿಸಿದ್ದು, 450 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆಯಲಾಗಿದೆ. ಅಲ್ಲದೇ 11 ದ್ವಿಚಕ್ರ ವಾಹನಗಳನ್ನು ಸೀಜ್ ಮಾಡಲಾಗಿದೆ. ಮಹಾರಾಷ್ಟ್ರದ ಗಡಿ ಭಾಗದಲ್ಲಿ ಮಾರುತ್ತಿದ್ದ 10 ಲೀಟರ್ ಮದ್ಯವನ್ನು ಹುಕ್ಕೇರಿ ಅಬಕಾರಿ ಪೊಲೀಸರು ಸೀಜ್ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಬಕಾರಿ ದಾಳಿಯಲ್ಲಿ ನಿರೀಕ್ಷಕ ಸತೀಶ್ ಕಾಗಲಿ, ಉಪ ನೀರಿಕ್ಷಕ ಮಲ್ಲೇಶ ಉಪ್ಪಾರ, ಮಲಿಕಸಾಬ್ ಪಾಶ್ಚಾಪೂರೆ, ಸಿಬ್ಬಂದಿ ಜಿ.ಡಿ.ಗಾಡೆ, ಬಸವರಾಜ, ಶಿವಾನಂದ ಚಿಕ್ಕಮಠ, ಬಸನಗೌಡ ಪಾಟೀಲ, ಕಾಡೇಶಿ ಗಡಾದ, ಉಮೇಶ್ ಕೋಳಿ, ಸುಶಾಂತ ಗುಗ್ಗರಿ ಇದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ