Breaking News

ಮಂತ್ರಾಲಯ ರಾಯರ ಮಠದಲ್ಲಿ ಹುಂಡಿ ಎಣಿಕೆ – 20 ದಿನದಲ್ಲಿ 2.78 ಕೋಟಿ ಕಾಣಿಕೆ ಸಂಗ್ರಹ

Spread the love

ರಾಯಚೂರು: ಕಲಿಯುಗದ ಕಾಮಧೇನು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಏಪ್ರಿಲ್ ಹಾಗೂ ಮೇ ತಿಂಗಳಿನ 20 ದಿನಗಳ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 2.78 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಏಪ್ರಿಲ್ ಹಾಗೂ ಮೇ ತಿಂಗಳಿನ 20 ದಿನಗಳಲ್ಲಿ ಕೋಟ್ಯಾಂತರ ರೂಪಾಯಿ ಕಾಣಿಕೆ ಹರಿದು ಬಂದಿದೆ. ಒಟ್ಟು 2,78,19,526 ರೂ. ಕಾಣಿಕೆ ಹರಿದು ಬಂದಿದ್ದು, ಇದರಲ್ಲಿ 2,69,28,176 ರೂ. ಕರೆನ್ಸಿ ನೋಟುಗಳು. 8,91,350 ರೂ. ನಾಣ್ಯಗಳು ಸಂಗ್ರಹವಾಗಿವೆ. 15.100 ಗ್ರಾಂ ಚಿನ್ನ, 751 ಗ್ರಾಂ ಬೆಳ್ಳಿಯನ್ನ ಕಾಣಿಕೆ ರೂಪದಲ್ಲಿ ಭಕ್ತರು ನೀಡಿದ್ದಾರೆ. 

ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಸೋಮವಾರ (ಮೇ 11) ರಾತ್ರಿ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ ಭಕ್ತರು, ಕರ ಸೇವಕರು ಭಾಗವಹಿಸಿದ್ದರು.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ