Breaking News

ಪಕ್ಕದ್ಮನೆ ಹುಡುಗಿ ಜೊತೆ ಪತಿ ಲವ್ವಿಡವ್ವಿ – ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹೊಡೆದು ಮಾರಣಾಂತಿಕ ಹಲ್ಲೆ, ಪತ್ನಿ ಸಾವು

Spread the love

ಬೀದರ್: ಪಕ್ಕದ್ಮನೆ ಹುಡುಗಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿ ರಾಡ್‌ನಿಂದ ಹೊಡೆದು ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ  ತಾಲೂಕಿನ ಗಾಯಮುಖ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಕೊಲೆಯಾದ ದುರ್ದೈವಿ ಪತ್ನಿ. ಆರೋಪಿ ಪತಿ ಭಗವತ್ ಜ್ಞಾನೇಶ್ವರ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಸಂಜನಾ ಹಾಗೂ ಭಗವತ್ 2 ವರ್ಷದ ಹಿಂದೆ ಮದುವೆಯಾಗಿದ್ದರು. ಪತಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಬೀದರ್‌ನ ಶಿವನಗರದಲ್ಲಿ ವಾಸವಾಗಿದ್ದರು. ಈ ವೇಳೆ ಪತಿ ಪಕ್ಕದ ಮನೆಯ ಹುಡುಗಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಇದನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯ ಜೊತೆ ಗಲಾಟೆ ಮಾಡಿ, ಹೊನ್ನಿಕೇರಿ ಅರಣ್ಯಕ್ಕೆ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಕಬ್ಬಿಣದ ರಾಡ್‌ನಿಂದ ತಲೆ, ಕತ್ತಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.

ಭೀಕರವಾಗಿ ಗಾಯಗೊಂಡಿದ್ದ ಪತ್ನಿಯನ್ನು ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಬ್ರಿಮ್ಸ್ ಶವಾಗಾರದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ