Breaking News

ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು – ಪ್ರಾಣಬಿಟ್ಟ ನವದಂಪತಿ

Spread the love

ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು ಕಂಡು ಪತಿಯೂ ಸೂಸೈಡ್ ಮಾಡಿಕೊಂಡಿರುವ ಘಟನೆ ತುಮಕೂರು  ಜಿಲ್ಲೆಯ ಶಿರಾ  ತಾಲ್ಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.

ಶರಣ್ಯ (20), ಗಿರೀಶ್ (28) ಆತ್ಮಹತ್ಯೆಗೆ ಶರಣಾದ ನವದಂಪತಿ. 

ದಂಪತಿ ಕಳೆದ ಕಳೆದ ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದರು. ಮನೆಯಲ್ಲಿ ಯಾರು ಇಲ್ಲದೆ ವೇಳೆ ಪತ್ನಿ ಶರಣ್ಯ ಆತ್ಮಹತ್ಯೆಗೆ ಶರಣಾಗಿದ್ದರು. ಇದನ್ನ ಕಂಡ ಪತಿ ಹೊಲದ ಹತ್ತಿರದಲ್ಲಿದ್ದ ಮರಕ್ಕೆ ನೇಣಿಬಿಗಿದುಕೊಂಡು ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅಸ್ವಾಭಾವಿಕ ಸಾವು) ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ