Breaking News

ಮದುವೆಯಾದ 3 ತಿಂಗಳಿಗೆ ಪತ್ನಿ ಕೊಂದು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಪರಾರಿಯಾದ ಪತಿ

Spread the love

ಬೆಂಗಳೂರು: ಮದುವೆಯಾದ ಮೂರೇ ತಿಂಗಳಿಗೆ ವ್ಯಕ್ತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ, ಮೃತದೇಹವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿಟ್ಟು ಮನೆಗೆ ಬೀಗ ಹಾಕಿ ಪರಾರಿಯಾದ ಘಟನೆ ಬೆಂಗಳೂರಿನ  ಕುಂಬಳಗೋಡು ಸಮೀಪದ ಗೇರುಪಾಳ್ಯದಲ್ಲಿ ಬೆಳಕಿಗೆ ಬಂದಿದೆ.

ಬಿಹಾರ  ಮೂಲದ ರಿಯಾ ಕುಮಾರಿ ಮೃತ ಮಹಿಳೆ. ಆರೋಪಿ ಪತಿ ಧೀರಜ್ ಕುಮಾರ್ ತಲೆಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ನಾಲ್ಕು ತಿಂಗಳ ಹಿಂದೆ ಈ ದಂಪತಿ ಬಿಹಾರದಿಂದ ಬೆಂಗಳೂರಿಗೆ ಬಂದು ಗೇರುಪಾಳ್ಯದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ರಿಯಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಧೀರಜ್ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ. ಆದರೆ, ಕಳೆದ ಕೆಲವು ದಿನಗಳಿಂದ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಸ್ನೇಹಿತರು ಹಲವು ಬಾರಿ ಸಮಾಧಾನ ಮಾಡಿದರೂ ಪರಿಸ್ಥಿತಿ ಸುಧಾರಿಸಿರಲಿಲ್ಲ.

ಜಗಳ ತೀವ್ರಗೊಂಡ ವೇಳೆ ಧೀರಜ್ ಪತ್ನಿಯನ್ನು ಕೊಲೆ ಮಾಡಿ, ಮೃತದೇಹವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿ ಮನೆಯೊಳಗೆ ಬಿಟ್ಟು ಬಾಗಿಲು ಹಾಕಿಕೊಂಡು ಪರಾರಿಯಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ