ರಾಮನಗರ: ಆಕಸ್ಮಿಕ ಅಗ್ನಿ ಅವಘಡದಲ್ಲಿ ಬಡ ದಂಪತಿಯ ಗುಡಿಸಲು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮೆಣಸಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಾಕಮ್ಮ ಹಾಗೂ ಮರಿಯಣ್ಣ ದಂಪತಿಗೆ ಸೇರಿದ ಗುಡಿಸಲಿಗೆ ಬೆಂಕಿ ತಗಲಿದ್ದು, ಘಟನೆ ವೇಳೆ ಅದೃಷ್ಟವಶಾತ್ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಂಪತಿ ಸ್ವಂತ ಮನೆ ನಿರ್ಮಿಸಿಕೊಳ್ಳುವ ಕನಸಿನಿಂದ ತಮ್ಮ ಹಸು ಮಾರಿ 2 ಲಕ್ಷ ಹಣವನ್ನು ಗುಡಿಸಲಿನಲ್ಲಿ ಇಟ್ಟುಕೊಂಡಿದ್ದರು. ಆದರೆ, ಮುಂಜಾನೆ ಏಕಾಏಕಿ ತಗಲಿದ ಆಕಸ್ಮಿಕ ಬೆಂಕಿಯ ಕೆನ್ನಾಲಿಕೆಗೆ ಗುಡಿಸಲಿನಲ್ಲಿದ್ದ 2 ಲಕ್ಷ ನಗದು, ಜಮೀನಿನ ದಾಖಲೆಗಳು ಹಾಗೂ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಡ ದಂಪತಿ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದು, ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.
Laxmi News 24×7