Breaking News

ಊಟ, ನೀರಿನ ಸೌಲಭ್ಯವಿಲ್ಲದೆ ಕೊರೊನಾ ವಾರಿಯರ್ಸ್ ಪರದಾಟ………..

Spread the love

ಹಾವೇರಿ: ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಆರೋಗ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆ ಊಟ, ಕುಡಿಯುವ ನೀಡಿನ ಸೌಲಭ್ಯ ಸಿಗದೆ ಪರದಾಡುತ್ತಿರುವ ಘಟನೆ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ನಡೆದಿದೆ.

ಸವಣೂರು ಪಟ್ಟಣದ ಕೊರೊನಾ ಸೋಂಕಿತ ರೋಗಿ ಸಂಖ್ಯೆ ಪಿ-639 ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಕಾರಣ ಸ್ಟಾಪ್ ನರ್ಸ್, ಲ್ಯಾಬ್ ಟೆಕ್ನಿಷಿಯನ್, ಆಶಾ ಕಾರ್ಯಕರ್ತೆ ಅವರನ್ನು ಒಳಗೊಂಡಂತೆ ಮೂವರನ್ನು ಜಿಲ್ಲಾಡಳಿತ ನಿನ್ನೆಯಿಂದ ಪಟ್ಟಣದ ಖಾಸಗಿ ಹೊಟೇಲ್‍ನಲ್ಲಿ ಕ್ವಾರಂಟೈನ್ ಮಾಡಿದೆ.

ಕೊರೊನಾ ವಾರಿಯರ್ಸ್ ಕ್ವಾರಂಟೈನ್ ಮಾಡಿದ ಬಳಿಕ ಜಿಲ್ಲಾಡಳಿತ ಹಾಗೂ ಸ್ಥಳೀಯ ಆರೋಗ್ಯ ಇಲಾಖೆ ಅಧಿಕಾರಿಗಳು ಈವರೆಗೂ ಯಾವುದೇ ಸೌಲಭ್ಯ ಕಲ್ಪಿಸಿಲ್ಲ. ಇಂದು ಸಂಜೆ 4 ಗಂಟೆಯಾದರೂ ಇದುವರೆಗೂ ಕ್ವಾರಂಟೈನ್‍ನಲ್ಲಿರೋ ಮೂವರಿಗೆ ಊಟ ವ್ಯವಸ್ಥೆಯನ್ನೇ ಮಾಡಿಲ್ಲ. ಹೀಗಾಗಿ ಕುಡಿಯಲು ನೀರು, ತಿನ್ನಲು ಊಟ ಸಿಗದೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆ ಪರದಾಡುತ್ತಿದ್ದಾರೆ.

ನಮ್ಮನ್ನು ಕ್ವಾರಂಟೈನ್ ಮಾಡಿದ್ದು ಬಿಟ್ಟರೆ ಇದುವರೆಗೂ ನಮಗೆ ಯಾವುದೇ ಕನಿಷ್ಠ ಸೌಲಭ್ಯಗಳನ್ನು ನೀಡಿಲ್ಲ ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ

Spread the loveಹಾವೇರಿ, ಜೂನ್​ 26: ಸರ್ಕಾರಿ ನೌಕರನಿಗೆ ಲಂಚ (bribe) ನೀಡಲು ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿಯ ಮಾಂಗಲ್ಯ  ಸರವನ್ನು (Mangalsutra) ಅಡವಿಟ್ಟ ಘಟನೆಯೊಂದು ಹಾವೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ