Breaking News

ನಾನೂ ಸಿಎಂ ಸ್ಥಾನದ ಆಕಾಂಕ್ಷಿ; ಸಚಿವ ಸತೀಶ್ ಜಾರಕಿಹೊಳಿ

Spread the love

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಶಿವಮೊಗ್ಗದಲ್ಲಿ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ತಾವೂ ಕೂಡ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದು ಹೇಳುವ ಮೂಲಕ ಹೊಸ ಸಂಚಲನ ಮೂಡಿಸಿದ್ದಾರೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸ್ಥಾನದ ಮೇಲೆ ತಮಗೂ ಆಸೆ ಇದೆ ಎಂದು ಬಹಿರಂಗವಾಗಿ ಘೋಷಿಸಿದ್ದಾರೆ. ರಾಜ್ಯದಲ್ಲಿ ಸಿಎಂ ಸ್ಥಾನಕ್ಕಾಗಿ ನಾನು ಕೂಡ ಕಾಯುತ್ತಿದ್ದೇನೆ ಎಂದು ಹೇಳಿದ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸುಮಾರು 10 ಜನರು ಈ ಸಾಲಿನಲ್ಲಿ ನಿಂತಿದ್ದಾರೆ ಎಂದರು. ಆಕಾಂಕ್ಷಿಗಳು ಹೆಚ್ಚಿರುವುದು ನಿಜ, ಹಾಗಂತ ತಕ್ಷಣಕ್ಕೆ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. ಮುಂದುವರಿದು ಮಾತನಾಡಿದ ಅವರು, ರಾಜಕೀಯದಲ್ಲಿ ಎಲ್ಲರಿಗೂ ಅವಕಾಶಗಳು ಸಿಗುತ್ತವೆ, ಆದರೆ ಆ ಅವಕಾಶ ಬರುವವರೆಗೂ ತಾಳ್ಮೆಯಿಂದ ಕಾಯುವುದು ಅನಿವಾರ್ಯ ಎಂದು ಮಾರ್ಮಿಕವಾಗಿ ನುಡಿದರು. ಬೈಟ್
ಸದ್ಯಕ್ಕೆ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರಾದರೂ, ಸಿಎಂ ರೇಸ್‌ನಲ್ಲಿ ತಾವೂ ಒಬ್ಬ ಪ್ರಬಲ ಸ್ಪರ್ಧಿ ಎಂಬ ಸಂದೇಶವನ್ನು ರವಾನಿಸಿದ್ದಾರೆ. ಇವರ ಈ ಹೇಳಿಕೆಯು ಆಡಳಿತ ಪಕ್ಷದ ಒಳಗೆ ಮತ್ತು ಹೊರಗೆ ದೊಡ್ಡ ಮಟ್ಟದ ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ