Breaking News

ಆರೋಗ್ಯವಾಗಿದ್ದೇನೆ, ಸುಳ್ಳು ಸುದ್ದಿ ಹಬ್ಬಿಸಿದವರನ್ನು ಸುಮ್ನೆ ಬಿಡಲ್ಲ – ದೊಡ್ಡಣ್ಣ ರಿಯಾಕ್ಷನ್‌

Spread the love

ಬೆಳ್ಳಂಬೆಳಗ್ಗೆ ಕಿಡಿಗೇಡಿಗಳು ಹಿರಿಯ ನಟ ದೊಡ್ಡಣ್ಣ ಅವರು ಸಾವನ್ನಪ್ಪಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಇದೀಗ ಖುದ್ದು ದೊಡ್ಡಣ್ಣ  ಅವರೇ, ನಾನು ಆರೋಗ್ಯವಾಗಿದ್ದೇನೆ, ಸುಳ್ಳು ಸುದ್ದಿ ಹಬ್ಬಿಸಿದವರನ್ನು ಸುಮ್ಮನೇ ಬಿಡಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವಿಡಿಯೋ ಮೂಲಕ ತಿಳಿಸಿರುವ ಅವರು, ಬೆಳಿಗ್ಗೆ ನಾನು ಎದ್ದೇಳುವ ಮುಂಚೆಯೇ ಯಾರೋ ಅವಿವೇಕಿಗಳು ನಾನು ನಿಧನ ಎಂದು ಸುದ್ದಿ ಹಬ್ಬಿಸಿದ್ದರು. ಅದು ಶುದ್ಧ ಸುಳ್ಳು. ನಾನು ಆರೋಗ್ಯವಾಗಿ, ನೆಮ್ಮದಿಯಾಗಿದ್ದೇನೆ. ಬೆಳಿಗ್ಗೆಯಿಂದಲೂ ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಎಲ್ಲರೂ ಬಿಟ್ಟುಬಿಡದೇ ಕರೆ ಮಾಡ್ತಿದ್ದಾರೆ. ನಿಮ್ಮ ಆಶೀರ್ವಾದ ಇರುವವರೆಗೂ ನೂರುಕಾಲ ಚೆನ್ನಾಗಿರುತ್ತೇನೆ ಅಂತಾ ನಂಬಿದ್ದೇನೆ ಎಂದು ಹೇಳಿದ್ದಾರೆ.

ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳನ್ನು ಸುಮ್ಮನೇ ಬಿಡಲ್ಲ. ಅವರನ್ನು ಬೆನ್ನತ್ತಿ ತಕ್ಕ ಶಿಕ್ಷೆ ಕೊಡಿಸುತ್ತೇನೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ

Spread the loveಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ  ಸ್ಪರ್ಧಿಸಿದ್ದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಗಳು ಅಧಿಕೃತ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್‌ನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ