Breaking News

ದೆಹಲಿಯಲ್ಲಿ ಯಾರನ್ನು ಭೇಟಿ ಮಾಡುತ್ತೇನೆ ಎಂದು ಹೇಳಲು ಆಗುವುದಿಲ್ಲ: ಡಿಕೆಶಿ

Spread the love

ನವದೆಹಲಿ: ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡುತ್ತೇನೆ ಎಂದು ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳು ಹೈಕಮಾಂಡ್‌ ನಾಯಕರ  ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ, ದೆಹಲಿಗೆ ಬಂದ ಮೇಲೆ ನಾನು ಎಲ್ಲರನ್ನು ಭೇಟಿ ಮಾಡುತ್ತೇನೆ. ನೀವುಗಳು ಡಿ.ಕೆ ದೆಹಲಿಗೆ ಹೋದರೂ ನಾಯಕರು ಸಮಯ ನೀಡಿಲ್ಲ, ಕಾಯುತ್ತಾ ಕೂತಿದ್ದಾರೆ ಎಂದು ವರದಿ ಮಾಡುತ್ತೀರಲ್ಲಾ, ಹಾಗೇ ಕಾಯುತ್ತಾ ಕೂತಿರುವೆ ಎಂದರು.

ಪುಣೆಯಲ್ಲಿರುವ ನನ್ನ ಸ್ನೇಹಿತರ ಮನೆ ಮದುವೆ ಕಾರ್ಯಕ್ರಮವಿತ್ತು. ಹೀಗಾಗಿ ನಿನ್ನೆ ದೆಹಲಿಗೆ ಬಂದಿದ್ದೆ. ಇಂದು ಅಸ್ಸಾಂ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿದ್ದೆ. ಇಂದು ಅನೇಕ ಸಭೆಗಳಿವೆ. ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮವಿದೆ ಎಂದು ಹೇಳಿದರು.

ನಾಳೆಗೆ ನೀವು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಳ್ಳುತ್ತಿರುವ ಬಗ್ಗೆ ಕೇಳಿದಾಗ, ಹೌದು, ನಾಳೆಗೆ ನಾನು ಕೆಪಿಸಿಸಿ ಅಧ್ಯಕ್ಷನಾಗಿ 6 ವರ್ಷ ಪೂರ್ಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರಿಗೆ ಭೋಜನಕೂಟ ಹಮ್ಮಿಕೊಂಡಿದ್ದೇನೆ. ಮತ್ತೊಂದು ದಿನ ನಮ್ಮ ಪರಾಜಿತ ಅಭ್ಯರ್ಥಿಗಳು ಮತ್ತು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಭೋಜನಕೂಟ ಹಮ್ಮಿಕೊಳ್ಳಲಾಗುವುದು. ಈಗ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಸಕರಿಗೆ ಭೋಜನಕೂಟ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದರು.

ಖಾಸಗಿ ಕಾರ್ಯಕ್ರಮ ಎಂದರೂ ಡಿ.ಕೆ. ಶಿವಕುಮಾರ್ ದೆಹಲಿ ಭೇಟಿ ಎಂದರೆ ವಿಭಿನ್ನ ಚರ್ಚೆಗಳೇ ಸಾಗುತ್ತವೆ ಎಂದು ಕೇಳಿದಾಗ, ಯಾವ ವಿಭಿನ್ನ ಚರ್ಚೆನೂ ಬೇಡ. ನಾಳೆ ಭೋಜನಕೂಟವಿದೆ, ನಾಡಿದ್ದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇದೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ