ರಾಮನಗರ: ನನಗೆ ಜಾತಿಯ ಮೇಲೆ ನಂಬಿಕೆ ಇಲ್ಲ. ಮನುಷ್ಯತ್ವ ನನಗೆ ಬಹಳ ಮುಖ್ಯ. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತತ್ವಗಳು, ಬಸವಣ್ಣನವರ ಆಶಯಗಳ ಮೇಲೆ ನಾನು ರಾಜಕಾರಣವನ್ನು ಮಾಡುತ್ತಿದ್ದೇನೆ. ನನ್ನ ಈ 40 ವರ್ಷಗಳ ರಾಜಕಾರಣದಲ್ಲಿ ಯಾರನ್ನೂ ನೀನು ಯಾವ ಜಾತಿ ಎಂದು ಕೇಳಿಲ್ಲ. ಮಾನವೀಯತೆಯೇ ಬಹುದೊಡ್ಡ ಧರ್ಮ ಎಂದು ನಂಬಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಕನಕಪುರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಪರಿಶಿಷ್ಟ ಜಾತಿ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಕೃತಜ್ಞತಾ ಅಭಿನಂದನಾ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ನನಗೆ ಸಿಕ್ಕ ಈ ಅಧಿಕಾರ ನನ್ನದಲ್ಲ, ನಿಮ್ಮದು. ನನ್ನನ್ನು 10 ಬಾರಿ ಸಾತನೂರು, ಕನಕಪುರ ಮಹಾಜನತೆ ಆರಿಸಿ ಆಶೀರ್ವದಿಸಿ ಕಳುಹಿಸಿದ್ದೀರಿ. ಇಂದಿನ ಈ ಅಭಿಮಾನದ ಸನ್ಮಾನದ ಶ್ರೇಯ ನಿಮಗೇ ಸಲ್ಲಬೇಕು. ಸೇವೆ ಮಾಡುವ ಭಾಗ್ಯ ಕೊಟ್ಟಿದ್ದೀರಿ. ನೀವು ಇಟ್ಟಿರುವ ನಂಬಿಕೆ ಉಳಿಸಿಕೊಂಡು, ಕ್ಷೇತ್ರದ ಘನತೆಯನ್ನು ಹೆಚ್ಚಿಸುವ ಕೆಲಸ ಮಾಡುತ್ತೇನೆ ಎಂದು ವಾಗ್ದಾನ ನೀಡಿದರು.
Laxmi News 24×7