Breaking News

ನನಗೂ ಸಿಎಂ ಆಗಬೇಕು ಎಂಬ ಆಸೆ ಇದೆ: ಪ್ರದೀಪ್‌ ಈಶ್ವರ್‌

Spread the love

ದಾವಣಗೆರೆ: 25 ವರ್ಷಗಳ ಬಳಿಕ ನಾನು ಸಿಎಂ ಆಗಬೇಕು ಎಂಬ ಆಸೆ ಇದೆ ಎಂದು ಶಾಸಕ ಪ್ರದೀಪ್‌ ಈಶ್ವರ್‌  ಹೇಳಿದ್ದಾರೆ.

ದಾವಣಗೆರೆಯಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಶಿಕ್ಷಣ ಕ್ಷೇತ್ರ ಉದ್ಯಮವಾಗಿ ಬದಲಾಗುತ್ತಿರುವ ವಿಚಾರಕ್ಕೆ 2028ರಲ್ಲಿ ಉತ್ತರ ನೀಡುತ್ತೇನೆ. ಶಿಕ್ಷಣ ಸುಧಾರಣಾ ಸಬ್‌ ಕಮಿಟಿಗೆ ಹಲವು ಇನ್‌ಪುಟ್‌ಗಳನ್ನು ನೀಡಿದ್ದು, ಸಚಿವ ಸ್ಥಾನ ನೀಡಿದರೆ ಉತ್ತಮವಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.

ತಮ್ಮ ಕ್ಷೇತ್ರದ 7ನೇ ತರಗತಿಯ 359 ವಿದ್ಯಾರ್ಥಿಗಳಿಗೆ ವರ್ಣಮಾಲೆಯೇ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರಿಗೆ ನೋಟಿಸ್ ನೀಡಿದ್ದಾರೆ. 25 ವರ್ಷಗಳ ಬಳಿಕ ನಾನು ಮುಖ್ಯಮಂತ್ರಿ ಆಗಬೇಕು ಎಂಬ ಬಯಕೆ ಇದೆ. ಸಚಿವ ಸ್ಥಾನವಾದರೂ ನೀಡಿದರೆ ಕೆಲಸ ಮಾಡಿ ತೋರಿಸುತ್ತೇನೆ ಎಂದು ಹೇಳಿದರು.

ಚುನಾವಣಾ ಆಯೋಗದ  ಬಗ್ಗೆ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿ, ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಬಿಜೆಪಿ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು. ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಅವರು, ಖಜಾನೆ ಖಾಲಿಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನೂ, ಆರ್‌.ಅಶೋಕ್ ವಿಪಕ್ಷ ನಾಯಕರಾಗಲು ಸೂಕ್ತ ಅಲ್ಲ. ಮುಂದಿನ ದಿನಗಳಲ್ಲಿ ಸುನೀಲ್ ಕುಮಾರ್ ವಿಪಕ್ಷ ನಾಯಕರಾಗಿ ಹಾಗೂ ಸೋಮಣ್ಣ ರಾಜ್ಯಾಧ್ಯಕ್ಷರಾಗಲಿದ್ದಾರೆ ಎಂದು ಇದೇ ವೇಳೆ ಭವಿಷ್ಯ ನುಡಿದರು.


Spread the love

About Laxminews 24x7

Check Also

ಗದಗ KRIDL ಎಇಇ ನಾಪತ್ತೆ ಕೇಸ್‌ – ಅಧಿಕಾರಿ ಪತ್ತೆಗಾಗಿ 5 ತಂಡ ರಚನೆ; ವಿಜಯವಾಡದಲ್ಲಿ ಲೊಕೇಷನ್‌ ಪತ್ತೆ!

Spread the loveಗದಗ: ರಾಜ್ಯ ಸರ್ಕಾರದಿಂದ ಅನುದಾನ ಬಂದಿಲ್ಲ, ಗುತ್ತಿಗೆದಾರರು ಕಿರುಕುಳ ಕೊಡ್ತಾರೆ ಅಂತಾ ನೊಂದು ಗದಗ ಕೆಆರ್‌ಐಡಿಎಲ್ ಇಲಾಖೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ