Breaking News

ಅತ್ತೆಯನ್ನು ನೋಡಿದಾಗ ಭಯವಾಗ್ತಿತ್ತು – ಸೋನಿಯಾ ಗಾಂಧಿ

Spread the love

ನವದೆಹಲಿ: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆತ್ಮಕಥನ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’  ಕೃತಿ ಸೋಮವಾರ ಅಧಿಕೃತವಾಗಿ ಬಿಡುಗಡೆಗೊಂಡಿದೆ.

ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಸೋನಿಯಾ ಗಾಂಧಿ ಅವರು, ಪುಸ್ತಕಕ್ಕೆ ಸಿಕ್ಕಿರುವ ಪ್ರತಿಕ್ರಿಯೆ ಉತ್ತಮವಾಗಿದೆ ಹಾಗೂ ನಾನು ತುಂಬಾ ಭಾವುಕಳಾಗಿದ್ದೇನೆ. ಇದೇ ವೇಳೆ ಕೃತಿಯ ಶೀರ್ಷಿಕೆಯ ಕುರಿತು ಮಾತನಾಡಿದ ಅವರು, ಬಿಲಾಂಗಿಂಗ್ ಎಂದರೆ ನೀವು ಇಲ್ಲಿಯವರೇ ಎಂದರ್ಥ. ನೀವು ಹೊರಗಿನವರಾಗಿದ್ದಾಗ, ನಿಮ್ಮನ್ನು ಯಾರೂ ಇಷ್ಟಪಡುವುದಿಲ್ಲ ಮತ್ತು ನಿಮ್ಮನ್ನು ಯಾವಾಗಲೂ ಗಮನಿಸಲಾಗುತ್ತಿದೆ ಎಂಬ ಭಾವನೆ ಮೂಡುತ್ತದೆ ಎಂದು ಹೇಳಿದರು.

ಇದೇ ವೇಳೆ ಇಂದಿರಾ ಗಾಂಧಿ ಅವರ ಬಗ್ಗೆ ಮಾತನಾಡಿ, ಅವರನ್ನು ಕಂಡರೆ ನನಗೆ ತುಂಬಾ ಗೌರವ ಮತ್ತು ಅಚ್ಚರಿ ಇತ್ತು. ಅವರದ್ದು ಪ್ರಭಾವಶಾಲಿ ವ್ಯಕ್ತಿತ್ವ. ಅವರನ್ನು ಕಂಡರೆ ನನಗೆ ಭಯವೂ ಆಗುತ್ತಿತ್ತು ಎಂದು ತಿಳಿಸಿದರು

ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಉಪಸ್ಥಿತರಿದ್ದರು. ಇವರೊಂದಿಗೆ ಇಂಡಿಯಾ ಮೈತ್ರಿಕೂಟದ ಹಲವು ನಾಯಕರು ಹಾಗೂ ಇತರ ಗಣ್ಯರು ಪಾಲ್ಗೊಂಡಿದ್ದರು. ಕಾಂಗ್ರೆಸ್ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ (ಕರ್ನಾಟಕ) ಮತ್ತು ಸುಖ್ವಿಂದರ್ ಸಿಂಗ್ ಸುಖು (ಹಿಮಾಚಲ ಪ್ರದೇಶ) ಭಾಗಿಯಾಗಿದ್ದರು.

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಟಿಎಂಸಿಯ ಅಭಿಷೇಕ್ ಬ್ಯಾನರ್ಜಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಎನ್‌ಸಿಪಿ (ಎಸ್‌ಪಿ) ನಾಯಕಿ ಸುಪ್ರಿಯಾ ಸುಳೆ, ಬಿಜೆಪಿ ನಾಯಕ ಹಾಗೂ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೇರಿದಂತೆ ಹಲವು ಹಿರಿಯ ಕಾಂಗ್ರೆಸ್ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


Spread the love

About Laxminews 24x7

Check Also

ದಕ್ಷಿಣ ಪಿನಾಕಿನಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ – ಮೃತದೇಹ ಹೊರತೆಗೆಯಲು ಬಂದ ವ್ಯಕ್ತಿಯೂ ನೀರಿನಲ್ಲಿ ಮುಳುಗಿ ಸಾವು

Spread the loveಬೆಂಗಳೂರು: ದಕ್ಷಿಣ ಪಿನಾಕಿನಿ ನದಿಗೆ  ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಮೃತದೇಹ ಹೊರತೆಗೆಯಲು ಬಂದ ವ್ಯಕ್ತಿಯೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ