Breaking News

ನೂರಕ್ಕೆ ನೂರರಷ್ಟು ಸಮರ್ಥ್‌ ಗೆಲ್ಲಿಸುವ ಕೆಲಸ ಮಾಡ್ತೀನಿ: ಜಮೀರ್ ಅಹ್ಮದ್

Spread the love

ದಾವಣಗೆರೆ: ಇಲ್ಲಿನ ದಕ್ಷಿಣ ಕ್ಷೇತ್ರದ  ಉಪಚುನಾವಣೆಯಲ್ಲಿ  ಕಾಂಗ್ರೆಸ್‌  ಅಭ್ಯರ್ಥಿ ಸಮರ್ಥ್‌ ಶಾಮನೂರು  ಅವರನ್ನು ನೂರಕ್ಕೆ ನೂರರಷ್ಟು ಗೆಲ್ಲಿಸುವ ಕೆಲಸ ಮಾಡ್ತೀನಿ ಎಂದು ಜಮೀರ್ ಅಹ್ಮದ್  ಹೇಳಿದ್ದಾರೆ.

ದಾವಣಗೆರೆಯಲ್ಲಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್‌ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಾನು ಕೇರಳದಲ್ಲಿ ಸ್ಟಾರ್ ಪ್ರಚಾರಕನಾಗಿದ್ದೆ. ಹತ್ತು ಕ್ಷೇತ್ರ ಕೊಟ್ಟಿದ್ದರು. ಇಂದು (ಏ.5) ಇಲ್ಲಿಗೆ ಬರುತ್ತೇನೆ ಎಂದು ಹೇಳಿದ್ದೆ. ದಾವಣಗೆರೆಗೆ ಬಂದಿದ್ದೇನೆ ಸಮರ್ಥ್ ಗೆಲ್ಲಿಸಿಕೊಂಡು ಹೋಗುತ್ತೇನೆ. ನೂರಕ್ಕೆ ನೂರರಷ್ಟು ಸಮರ್ಥ್ ಗೆಲ್ಲಿಸುವ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಕಳೆದ ಚುನಾವಣೆಯಲ್ಲಿ ನಾಲ್ಕು ಜನ ಮುಸ್ಲಿಮರು ನಿಂತಿದ್ದರು. ಆದರೂ ಕೂಡ ಗೆದ್ದು ಬಂದಿದ್ದೇವೆ. ದಾವಣಗೆರೆ ದಕ್ಷಿಣ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಯಾರಾದರೂ ಶಾಸಕರು ಸಾವನ್ನಪ್ಪಿದರೆ ಅವರ ಕುಟುಂಬಕ್ಕೆ ಟಿಕೆಟ್‌ ಕೊಡುವುದು ನಮ್ಮ ಪಕ್ಷದ ಸಂಪ್ರದಾಯ. 2028ಕ್ಕೆ ಯಾರಿಗೆ ಟಿಕೆಟ್‌ ಕೊಡುತ್ತಾರೆ ಎಂಬುದು ಹೈಕಮಾಂಡ್‌ಗೆ ಬಿಟ್ಟಿದ್ದು ಎಂದರು. ಇದೇ ವೇಳೆ ನಾನು ಮಲ್ಲಿಕಾರ್ಜುನ್ ಆತ್ಮೀಯ ಸ್ನೇಹಿತರು ಎಂದಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ