Breaking News

IAS ಅಧಿಕಾರಿ ಐಟಿ, ಇಡಿ ಭಯದಿಂದ ಎಸ್ಕೇಪ್ ಆಗಿಲ್ಲ, ತಂದೆ ನೋಡೋಕೆ ಹೋಗಿದ್ದಾರೆ: ಪ್ರಿಯಾಂಕ್‌ ಖರ್ಗೆ

Spread the love

ಬೆಂಗಳೂರು: ಐಎಎಸ್‌ ಅಧಿಕಾರಿ  ಜ್ಞಾನೇಂದ್ರ ಕುಮಾರ್ ನಾಪತ್ತೆ ಆಗಿಲ್ಲ. ಅವರ ತಂದೆಗೆ ಅನಾರೋಗ್ಯದ ಹಿನ್ನಲೆ ನೋಡಲು ಊರಿಗೆ ಹೋಗಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

ಪಶುವೈದ್ಯಧಾರಿ ಪರೀಕ್ಷೆ ಅಕ್ರಮ ಸಂಬಂಧ ಕೆಪಿಎಸ್‌ಸಿ  ಕಚೇರಿ, ಸೇರಿದಂತೆ ಹಲವು ಕಡೆಗಳಲ್ಲಿ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ ನಂತರ ಪರೀಕ್ಷೆ ಕಂಟ್ರೋಲರ್‌ ಆಗಿ ಕೆಲಸ ಮಾಡಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದಾರೆ ಅನ್ನೋ ಆರೋಪ ಕೇಳಿ ಬಂದಿತ್ತು.

ಏರ್ ಟಿಕೆಟ್ ಬುಕ್ ಮಾಡಿದ್ದ ಅಧಿಕಾರಿ ಆಗಸ್ಟ್ 20 ರಂದು ದೆಹಲಿಗೆ ತೆರಳಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಯ ‌ ಫ್ಲೈಟ್‌ಗೆ 1 ಗಂಟೆ 31 ನಿಮಿಷಕ್ಕೆ ಟಿಕೆಟ್ ಬುಕ್ಕಿಂಗ್ ಆಗಿದೆ. ಒಂದೂವರೆ ಗಂಟೆ ಮುಂಚಿತವಾಗಿ ಜ್ಞಾನೇಂದ್ರ ಕುಮಾರ್ 30,253 ರೂಪಾಯಿ ಹಣ ನೀಡಿ ತರಾತುರಿಯಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಿರುವುದು ಕಂಡುಬಂದಿತ್ತು. ಈ ಸಂಬಂಧ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಜ್ಞಾನೇಂದ್ರ ಕುಮಾರ್‌ ಅವರನ್ನ ಪತ್ತೆಮಾಡುವಂತೆ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ರು.

ಅಧಿಕಾರಿಗಳು ಪರಿಶೀಲಿಸಿದ ಬಳಿಕ ಮಾಹಿತಿ ಪಡೆದು ಮಾತನಾಡಿದ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿಲ್ಲ. ಅವರ ತಂದೆಗೆ ಹೃದಯ ಸಂಬಂಧ ಕಾಯಿಲೆ ವಿಚಾರ ತಿಳಿದು ತುರ್ತಾಗಿ ಉತ್ತರ ಪ್ರದೇಶಕ್ಕೆ ಹೋಗಿದ್ದಾರೆ ಎಂದು ತಿಳಿಸಿದ್ದಾರೆ.

ಹೋಗುವಾಗ ಮೇಲ್ ಮೂಲಕ ಮೇಲಾಧಿಕಾರಿಗೆ ತಿಳಿಸಿದ್ದಾರೆ. ಆದ್ರೆ ನಿನ್ನೆ ಹಬ್ಬದ ಇದ್ದ ಕಾರಣ ನೋಡಿಕೊಂಡಿಲ್ಲ. ಇನ್ನೂ ಎರಡು ದಿನದಲ್ಲಿ ಅವರ ಬೆಂಗಳೂರಿಗೆ ವಾಪಸು ಬರಲಿದ್ದಾರೆ. ಯಾವುದೇ ಐಟಿ, ಇಡಿ ಭಯದಿಂದ ಎಸ್ಕೇಪ್ ಆಗಿಲ್ಲ ಎಂದಿದ್ದಾರೆ.


Spread the love

About Laxminews 24x7

Check Also

ಹಂಪಿಯ ತುಂಗಭದ್ರಾ ನದಿಯಲ್ಲಿ ಕಾಲುಜಾರಿ ಬಿದ್ದು ತಾಯಿ, ಮಗಳು ನಾಪತ್ತೆ

Spread the loveಬಳ್ಳಾರಿ: ಪ್ರವಾಸಕ್ಕೆ ಬಂದಿದ್ದ ತಾಯಿ ಮಗಳು ತುಂಗಭದ್ರಾ ನದಿಯಲ್ಲಿ  ನಾಪತ್ತೆಯಾಗಿರುವ ಘಟನೆ ವಿಜಯನಗರ (Vijayanagara) ಜಿಲ್ಲೆ ಹೊಸಪೇಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ