ಬೆಳಗಾವಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 4ರ ಬಳಿ ವಿನಾಕಾರಣ ಆರೋಗ್ಯ ಇಲಾಖೆ ಅಧಿಕಾರಿಯ ಮೇಲೆ ಪೊಲೀಸರು ಪ್ರಜ್ಞಾಹೀನರಾಗುವವರೆಗೂ ಥಳಿಸಿದ ಘಟನೆ ಇಂದು ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿ ಮಹಾಂತೇಶ ನಗರದಿಂದ ಮನೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಲಾಠಿ ಏಟು ತೊರಿಸಿದ್ದಾರೆ. ನಾನು ಆರೋಗ್ಯ ಇಲಾಖೆಯ ಅಧಿಕಾರಿಯಾಗಿದ್ದೆನೆ. ಕೆಲಸದಿಂದ ಮನೆಗೆ ಹೋಗುತ್ತಿದ್ದೆನೆ ಎಂದು ಐಡಿ ಕಾರ್ಡ್ ತೊರಿಸಿದರು. ಪೊಲೀಸರು ಏನು ಅಂತನು ಸಹ ವಿಚಾರಿಸಿದೆ ಹೊಡೆದಿದ್ದಾರೆ ಎಂದು ಬಸವರಾಜ ತಿಳಿಸಿದ್ದಾರೆ.
ಐಡಿ ಕಾರ್ಡ್ ತೋರಿಸಿದರು ಸಹ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹಲ್ಲೆಗೊಳಗಾದ ವ್ಯಕ್ತಿ ಒತ್ತಾಯಿಸಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.