Breaking News

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ

Spread the love

ತುಮಕೂರು: ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್, ಜನರನ್ನು ಆಕರ್ಷಿಸುವ ನಾಯಕರಿದ್ದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು.

ಮಧುಗಿರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿಯವರ ನಂತರ ಮಾಸ್ ಲೀಡರ್ ಅಂತ ಯಾರಾದರೂ ಇದ್ದರೆ ಅದು ನರೇಂದ್ರ ಮೋದಿ. ಹಾಗಂತ ನಾನು ಮೋದಿಯವರನ್ನು ಹೊಗಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದರು.

ರಾಜಕಾರಣದಲ್ಲಿ ಪಾಪುಲಾರಿಟಿ ಯಾರಿಗೂ ಶಾಶ್ವತವಲ್ಲ. ಅದನ್ನು ಮೊದಲು ಅವರು ಅರಿಯಬೇಕು. ಈ ಹಿಂದೆ ಇಂದಿರಾಗಾಂಧಿಯವರ ಹೆಸರು ಹೇಳಿಕೊಂಡೇ 200 ಜನ ಎಂಪಿಗಳು ಗೆಲ್ಲುತ್ತಿದ್ದರು. ಆದರೆ ಅವರೇ ಪರಿಸ್ಥಿತಿಯ ಒತ್ತಡಗಳಿಗೆ ಸಿಲುಕಿ ಸ್ವಯಂ ಸೋಲು ಅನುಭವಿಸಬೇಕಾಯಿತು ಎಂದರು.

‘ನೀವು ಮೋದಿಯನ್ನು ಹೊಗಳಬಿಟ್ಟವ್ನೇ’ ಅಂತ ಬರೆದರೆ ನಮ್ಮವರೆಲ್ಲ ನನ್ನ ಮೇಲೆ ಕಣ್ಣು ಕೆಂಪಗೆ ಮಾಡ್ಕೋತಾರೆ. ನಾನು ವಾಸ್ತವಾಂಶವನ್ನ ಹೇಳುವವನು. ಮೋದಿ ಈಗ ಆಕಾಶದಲ್ಲಿ ಇದ್ದಾರೆ, ಭೂಮಿಗೆ ಬಂದಾಗ ಕಷ್ಟ, ಸುಖ ಎನು ಅಂತ ಗೊತ್ತಾಗುತ್ತೆ ಎಂದರು.


Spread the love

About Laxminews 24x7

Check Also

ಶಾಲಾ-ಕಾಲೇಜುಗಳಲ್ಲಿ ಹಿಜಬ್‌ಗೆ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ – ಕೇಸರಿ ಶಾಲಿಗಿಲ್ಲ ಅವಕಾಶ

Spread the loveಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ಗೆ ರಾಜ್ಯ ಸರ್ಕಾರ ಮತ್ತೆ ಅವಕಾಶ ಕಲ್ಪಿಸಿದೆ. ಎಲ್ಲಾ ಧರ್ಮಗಳ ಧಾರ್ಮಿಕ, ಸಾಂಪ್ರದಾಯಿಕ ವಸ್ತುಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ