Breaking News

ಅಪ್ಪಾಜಿ ನೀವು ಹೋದ್ರೆ ನಮ್ಮನ್ನ ಕೈ ಬಿಡ್ತಾರೆ – ಸಿಎಂ ಮುಂದೆ ಕಣ್ಣೀರಿಟ್ಟ ನೌಕರರು

Spread the love

ಬೆಂಗಳೂರು: ಸಿದ್ದರಾಮಯ್ಯ  ಅವರು ಮೇ 28 ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ವಿಧಾನಸೌಧದಲ್ಲಿದ್ದ ಆಡ್ಮಿನ್ ವಿಭಾಗದ ಮಹಿಳಾ ಸಿಬ್ಬಂದಿ ಕಣ್ಣೀರಿಟ್ಟಿದ್ದಾರೆ. ಅಪ್ಪಾಜಿ ಅಪ್ಪಾಜಿ.. ನೀವು ಹೋದ್ರೆ ನಮ್ಮನ್ನ ಕೈ ಬಿಡ್ತಾರೆ ಎಂದು ಕೆಲ‌ ನೌಕರರು ಗೋಳಾಡಿದ್ದಾರೆ.

ನಿಮ್ಮ ಹೆಸರು ಹೇಳಿಕೊಂಡು ಬದುಕುತ್ತಿದ್ದೇವು ಎಂದು ವಿಧಾನಸೌಧದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಕಣ್ಣೀರಿಟ್ಟಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಅವರು ವಿಷಲ್‌ ಹೊಡೆದುಕೊಂಡು ಅಲ್ಲಿಂದ ತೆರಳಿದ್ದಾರೆ. ತಮ್ಮ ಹಳೆಯ ಶೈಲಿಯಲ್ಲಿಯೇ ನಿರ್ಗಮಿಸಿದರು.

ಇನ್ನೂ ಇದೇ ವೇಳೆ ಸಿಎಂಗೆ ಅಭಿಮಾನಿಗಳು ಜೈಕಾರ ಕೂಗಿದ್ದಾರೆ. ಸಿಎಂ ನೋಡಲು ಸಿಬ್ಬಂದಿ ದಂಡು ಸೇರಿದ್ದರು. ಸಿದ್ದರಾಮಯ್ಯ ಬೇಕು ಎಂದು ಅಭಿಮಾನಿಗಳು ಕೂಗಿದರು. ಆದರೆ ಸಿದ್ದರಾಮಯ್ಯ ಮಾತ್ರ ಏನೂ ಮಾತನಾಡದೇ ಅಲ್ಲಿಂದ ತೆರಳಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ