ಕೋಲಾರ: ರೈಲಿನಲ್ಲಿ ಅಕ್ರವಾಗಿ ಸಾಗಿಸುತ್ತಿದ್ದ 5 ಲಕ್ಷ ರೂ. ಮೌಲ್ಯದ 10 ಕೆಜಿ ಗಾಂಜಾವನ್ನು ಸೀಜ್ ಮಾಡಿ, ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಲ್ಲಿಕೋಟೆ ಮೂಲದ ನರೇಂದ್ರ ಕರಣ್ (23) ಆರೋಪಿ. ಈತ ಹೊರ ರಾಜ್ಯದಿಂದ ಅಕ್ರಮವಾಗಿ ರೈಲಿನಲ್ಲಿ ಗಾಜಾ ಸಾಗಿಸುತ್ತಿದ್ದ. ಅಲ್ಲದೇ ಬಂಗಾರಪೇಟೆ ನಗರದ ರೈಲ್ವೆ ನಿಲ್ದಾಣದಲ್ಲಿ ಮಾರಾಟ, ಸಾಗಾಟ ಮಾಡುತ್ತಿದ್ದ.
ಬಂಗಾರಪೇಟೆ ರೈಲು ನಿಲ್ದಾಣದಲ್ಲಿ ಇಳಿದಿದ್ದ ಬಳಿಕ ಗಾಂಜಾವನ್ನು ತೆಗೆದುಕೊಂಡು ನಿಲ್ದಾಣದಿಂದ ಹೊರಹೋಗಲು ಯತ್ನಿಸುತ್ತಿದ್ದ ವೇಳೆ ಅನುಮಾನಗೊಂಡ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ರೈಲ್ವೆ ಪೊಲೀಸರ ಈ ಕಾರ್ಯವನ್ನು ಬೆಂಗಳೂರು ರೈಲ್ವೆ ಪೊಲೀಸ್ ಅಧೀಕ್ಷಕಿ ಸಾರಾ ಫಾತಿಮಾ ಪ್ರಶಂಸಿದ್ದಾರೆ.
Laxmi News 24×7