Breaking News

ಹಾಸನ, ತುಮಕೂರಿನಲ್ಲಿ ಅಕ್ರಮ ಬೀಜ ದಾಸ್ತಾನು ಜಪ್ತಿ

Spread the love

ತುಮಕೂರು: ರಾಜ್ಯದ ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ನಡೆಸಿದ ಪರಿಶೀಲನೆ ವೇಳೆ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಬೀಜ ಹಾಗೂ ಸೂಕ್ಷ್ಮ ಪೋಷಕಾಂಶಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹಾಸನ ಜಿಲ್ಲೆಯ ಸಾಲಗಾಮೆ ಹೋಬಳಿಯ ಕೊಂಡಜ್ಜಿಕೊಪ್ಪಲುವಿನ ಕಾರ್ತಿಕ್ ಟ್ರೇಡರ್ಸ್‌ನಲ್ಲಿ ಬೀಜ ಕಾಯ್ದೆ-1966 ಉಲ್ಲಂಘಿಸಿ ಯಾವುದೇ ಅನುಮತಿಯಿಲ್ಲದೆ ದಾಸ್ತಾನು ಮಾಡಲಾಗಿದ್ದ ಸುಮಾರು 85 ಸಾವಿರ ರೂ. ಮೌಲ್ಯದ 180 ಕೆ.ಜಿ. ಹೈಬ್ರೀಡ್ ಮೆಕ್ಕೆಜೋಳ ಬೀಜಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಅದೇ ರೀತಿ, ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಗೇಶಿ ಹೋಬಳಿಯ ಹಸಿರು ಹೈಟೆಕ್ ಸೀಡ್ಸ್ ಕೇಂದ್ರದಲ್ಲಿ ಅನಧಿಕೃತವಾಗಿ ಸಂಗ್ರಹಿಸಲಾಗಿದ್ದ ಸುಮಾರು 86 ಸಾವಿರ ರೂ. ಮೌಲ್ಯದ 22 ಲೀಟರ್ ಸೂಕ್ಷ್ಮ ಪೋಷಕಾಂಶ ಮಿಶ್ರಣವನ್ನು ವಶಪಡಿಸಿಕೊಳ್ಳಲಾಗಿದೆ.

ಬೀಜ ಹಾಗೂ ರಸಗೊಬ್ಬರ ಮಾರಾಟಗಾರರು ನಿಯಮಬಾಹಿರವಾಗಿ ಚಟುವಟಿಕೆ ನಡೆಸುತ್ತಿರುವುದು ಕಂಡುಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದೆ.


Spread the love

About Laxminews 24x7

Check Also

30 ದಿನ ಜೈಲಿಗೆ ಹೋದರೆ ಪ್ರಧಾನಿ, ಸಿಎಂ, ಸಚಿವರು ವಜಾ – ಮಸೂದೆಗೆ ಸಿದ್ಧತೆ

Spread the loveನವದೆಹಲಿ: ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ