Breaking News

ಅನ್ಯ ರಾಜ್ಯಕ್ಕೆ ಅಕ್ರಮವಾಗಿ ಅಕ್ಕಿ ಸಾಗಾಟ – ಲಕ್ಷಾಂತರ ಮೌಲ್ಯದ ಪಡಿತರ ಜಪ್ತಿ

Spread the love

ಬೀದರ್: ಅನ್ಯ ರಾಜ್ಯಕ್ಕೆ ಅಕ್ರಮವಾಗಿ ಸಾಗಾಣೆಯಾಗುತ್ತಿದ್ದ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿಯನ್ನು ಬೀದರ್ ಪೊಲೀಸರು  ಜಪ್ತಿ ಮಾಡಿದ್ದಾರೆ.

ಬೀದರ್ ಜಿಲ್ಲೆಯ ಚಿಟಗುಪ್ಪ ಪಟ್ಟಣದ ಶಿವಾಜೀ ವೃತ್ತದಲ್ಲಿ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ರಾಜಾರೋಷವಾಗಿ ಬೀದರ್‌ನಿಂದ ಪಡಿತರ ಅಕ್ಕಿ ಸಾಗಾಟ ಮಾಡಿ, ಬಳಿಕ ಮಹಾರಾಷ್ಟ್ರ ಸೇರಿದಂತೆ ಅನ್ಯರಾಜ್ಯದ ಕಾಳ ಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಪಡಿತರಿಗೆ ಸೇರಬೇಕಿದ್ದ ಅಕ್ಕಿ ಚೀಲಗಳು ಕಾಳಸಂತೆಗೆ ಅಕ್ರಮವಾಗಿ ಸಾಗಾಟ ಮಾಡಿ, ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಮತ್ತು ಪೊಲೀಸರಿ ಜಂಟಿ ಕಾರ್ಯಚರಣೆ ನಡೆಸಿದ್ದಾರೆ.

ಸದ್ಯ ಚಿಟಗುಪ್ಪ ಪೊಲೀಸರು ಪಡಿತರ ಅಕ್ಕಿ ಹಾಗೂ ವಾಹನ ಜಪ್ತಿ ಮಾಡಿದ್ದಾರೆ. ಈ ಕುರಿತು ಚಿಟಗುಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

8,000 ಕ್ಯೂಸೆಕ್ ನೀರು ಹರಿಯುತ್ತಿದ್ರೂ 6,000 ಕ್ಯೂ. ನೀರು ಬಿಡ್ತಿಲ್ಲ ಎಂದ ಚಲುವರಾಯಸ್ವಾಮಿ

Spread the loveಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಪ್ರಸ್ತುತ 8 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಯುತ್ತಿದ್ದರೂ, 6 ಸಾವಿರ ಕ್ಯೂಸೆಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ