ನಮ್ಮ ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ಆಗಮಿಸುವ ಅಪಾರ ಸಂಖ್ಯೆಯ ಭಕ್ತಾದಿಗಳಿಗೆ ಸುಸಜ್ಜಿತ ಮೂಲಸೌಕರ್ಯ ಕಲ್ಪಿಸುವುದು ಮತ್ತು ಕ್ಷೇತ್ರದ ಸಮಗ್ರ ಅಭಿವೃದ್ಧಿ ನಮ್ಮ ಮೊದಲ ಆದ್ಯತೆಯಾಗಿದೆ.
ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಗೌರವಾನ್ವಿತ ಜಿಲ್ಲಾಧಿಕಾರಿಗಳಾದ ಶ್ರೀ ಮೊಹಮ್ಮದ್ ರೋಷನ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಉಪಸ್ಥಿತಿಯಲ್ಲಿ “ಶ್ರೀ ರೇಣುಕಾ ಯಲ್ಲಮ್ಮ ದೇವಿ ಅಭಿವೃದ್ಧಿ ಪ್ರಾಧಿಕಾರದ” ಮಹತ್ವದ ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ಸವದತ್ತಿ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ರಸ್ತೆ ಅಭಿವೃದ್ಧಿ, ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ತೆಗೆದುಕೊಳ್ಳಬೇಕಾದ ಪ್ರಮುಖ ಕ್ರಮಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಉನ್ನತ ಅಧಿಕಾರಿಗಳು, ಪ್ರಾಧಿಕಾರದ ಪ್ರಮುಖರು ಉಪಸ್ಥಿತರಿದ್ದರು.
Laxmi News 24×7