ಮೆಸೇಜ್‌, ಕಾಲ್‌ ಮಾಡಿ ಅನುಚಿತ ವರ್ತನೆ – ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

Spread the love

ಬೆಂಗಳೂರು: ಖಾಸಗಿ ಆಸ್ಪತ್ರೆಯ ವೈದ್ಯನ ವಿರುದ್ಧ ಸಹೋದ್ಯೋಗಿಯೊಬ್ಬರು ಮೆಸೇಜ್‌ ಹಾಗೂ ಕಾಲ್‌ ಮಾಡಿ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿಸಿದ್ದಾರೆ.

ಈ ಸಂಬಂಧ ಸಂತ್ರಸ್ತೆ ಹೆಚ್‌ಎಸ್‌ಆರ್ ಲೇಔಟ್   ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್‌ಐಆರ್ ದಾಖಲಾಗಿದೆ.

ಸಂತ್ರಸ್ತೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಕಳೆದ 9 ತಿಂಗಳಿಂದ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಆಸ್ಪತ್ರೆ ಮುಖ್ಯಸ್ಥ ರಾಕೇಶ್ ಜಯಪ್ರಕಾಶ್ ಸಂತ್ರಸ್ತೆಯನ್ನ ನೋಡಿ, ಅವರೊಂದಿಗೆ ಅನುಚಿತವಾಗಿ ಮಾತಾಡಿದ್ದಾರೆ. ಅಲ್ಲದೇ ಮಿಸ್ ಯು ಅಂತ ಅನುಚಿತವಾಗಿ ಮೆಸೇಜ್ ಮಾಡಿದ್ದಾರೆ. ಕಾಲ್ ಮಾಡಿಯೂ ಅನುಚಿತವಾಗಿ ವರ್ತಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದೇ ವಿಚಾರ ತಿಳಿದು ಪತಿ ಕೂಡ ಜಗಳ ಮಾಡಿದ್ದಾರೆ. ಹೀಗಾಗಿ ಆಸ್ಪತ್ರೆ ಕೆಲಸ ಬಿಡುವ ಸ್ಥಿತಿ ಬಂತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ಘಟನೆ ಸಂಬಂಧ ಲೈಂಗಿಕ ಕಿರುಕುಳ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

ಸದ್ಯ ಹೊರರಾಜ್ಯದಲ್ಲಿರುವ ಆರೋಪಿ ವಿಚಾರಣೆಗೆ ಹಾಜರಾಗಲು ಸಮಯಾವಕಾಶ ಕೇಳಿಕೊಂಡಿದ್ದಾರೆಂದು ತಿಳಿದು ಬಂದಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ