Breaking News

ಬಾಲಕಿ ಜೊತೆ ಅನುಚಿತ ವರ್ತನೆ, ದೂರು ದಾಖಲು – ಮಲ್ಲಿಕಾರ್ಜುನ ಮುತ್ಯಾಗೆ ಸಂಕಷ್ಟ

Spread the love

ಬೆಂಗಳೂರು: ಅಪ್ರಾಪ್ತೆಯ  ಜೊತೆ ಮಲ್ಲಿಕಾರ್ಜುನ ಮುತ್ಯಾ  ಅನುಚಿತ ವರ್ತನೆ ತೋರಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು ಈ ಸಂಬಂಧ ದೂರು ದಾಖಲಾಗಿದೆ.

ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ತೊಡೆ ಮೇಲೆ ಬಾಲಕಿ ಕೂರಿಸಿಕೊಂಡು ಅನುಚಿತ ವರ್ತನೆ ತೋರಿದ್ದಾರೆ ಎಂಬ ಆರೋಪ ಬಂದಿದೆ. ಮುತ್ಯಾನ ತೊಡೆಯ ಮೇಲೆ ಬಾಲಕಿ ಕುಳಿತುಕೊಂಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ ಕೋಸಂಬೆ ಪಬ್ಲಿಕ್‌ ಟಿವಿಗೆ ಪ್ರತಿಕ್ರಿಯಿಸಿ, ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತೆ ಜೊತೆ ಅನುಚಿತ ವರ್ತನೆ ತೋರಿದ ವಿಡಿಯೋ ವೈರಲ್‌ ಆಗಿದೆ. ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು ಯಾದಗಿರಿ ಎಸ್‌ಪಿಗೆ ಕ್ರಮ ತೆಗೆದುಕೊಳ್ಳಲು ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಮೇಲ್ನೋಟಕ್ಕೆ ಅನುಚಿತ ವರ್ತನೆಯಂತೆ ಕಾಣುತ್ತಿದೆ. ಯಾರೇ ಆದರೂ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ವರದಿ ಆಧರಿಸಿ ಆಯೋಗವು ಕ್ರಮಕ್ಕೆ ಮುಂದಾಗಲಿದೆ ಎಂದರು.

ಯಾದಗಿರಿ ಜಿಲ್ಲೆಯ ಶಹಾಪುರದ ಮಹಲ್ ರೋಜಾದ ಮಲ್ಲಿಕಾರ್ಜುನ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುತ್ಯಾ ಎಂದೇ ಫೇಮಸ್‌ ಆಗಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ