Breaking News

ಆಲಮಟ್ಟಿ ಡ್ಯಾಂನಲ್ಲಿ ಹೆಚ್ಚಿದ ಒಳಹರಿವು – 2 ಟಿಎಂ‌ಸಿ ಇದ್ದ ನೀರು ಈಗ 25ಕ್ಕೆ ಏರಿಕೆ

Spread the love

ವಿಜಯಪುರ: ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕರ್ನಾಟಕಕ್ಕೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಈ ಹಿನ್ನೆಲೆ ವಿಜಯಪುರದ  ಆಲಮಟ್ಟಿ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಳವಾಗಿದೆ.

ಮಹಾರಾಷ್ಟ್ರದಲ್ಲಿ ಮಳೆಯಾಗುವ ಮುನ್ನ ಆಲಮಟ್ಟಿಯ ಲಾಲಬಾಹ್ದೂರ ಶಾಸ್ತ್ರಿ ಜಲಾಶಯದಲ್ಲಿ ಕೇವಲ 2 ಟಿಎಂಸಿ ನೀರಿತ್ತು. ಇದೀಗ ಉತ್ತಮ ಮಳೆಯಾಗಿ ನೀರು ಹರಿದು ಬರುತ್ತಿದ್ದು, 123.081 ಟಿಎಂಸಿ ಗರಿಷ್ಠ ಮಟ್ಟದ ಜಲಾಶಯದಲ್ಲಿ 25.536 ಟಿಎಂಸಿ ನೀರಿದೆ. 

ಸದ್ಯ ಜಲಾಶಯದಲ್ಲಿ 80,445 ಕ್ಯೂಸೆಕ್‌ ಒಳಹರಿವು ದಾಖಲಾಗಿದೆ. ನೀರು ಹರಿದು ಬರುತ್ತಿರುವ ಹಿನ್ನೆಲೆ ನೀರಿಲ್ಲದೇ ಕಂಗಾಲಾಗಿದ್ದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ.


Spread the love

About Laxminews 24x7

Check Also

ಸಿಎಂ ಡಿಕೆಶಿ ನನ್ನನ್ನು ಕೆಎಂಎಫ್ ಅಧ್ಯಕ್ಷರನ್ನಾಗಿ ಮಾಡುವ ನಂಬಿಕೆ ಇದೆ: ಕೆ.ವೈ.ನಂಜೇಗೌಡ

Spread the loveಕೋಲಾರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೊಟ್ಟ ಮಾತಿನಂತೆ ನನಗೆ ಕೆಎಂಎಫ್  ಅಧ್ಯಕ್ಷ ಸ್ಥಾನಕ್ಕೆ ಅವಕಾಶ ಮಾಡಿಕೊಡುತ್ತಾರೆ ಎಂಬ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ