Breaking News

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

Spread the love

ವಿಜಯಪುರ: ಬರಗಾಲ ಪೀಡಿತ ಪಟ್ಟಿಯಿಂದ  ವಿಜಯಪುರ  ಜಿಲ್ಲೆಯ ಇಂಡಿ, ಚಡಚಣ ತಾಲೂಕು ಕೈಬಿಟ್ಟ ಹಿನ್ನೆಲೆ ಇಂಡಿ  ಶಾಸಕ ಯಶವಂತರಾಯಗೌಡ ಪಾಟೀಲ್  ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹಲವು ಬಾರಿ ಮನವಿ ಮಾಡಿದರೂ ಇಂಡಿ ಹಾಗೂ ಚಡಚಣ ತಾಲೂಕು ಬರ ಘೋಷಣೆ ಆಗಿಲ್ಲ. ನಮ್ಮ ಮಾತಿಗೆ, ನಮ್ಮ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದೆ ಎಂದು ಬೇಸರಗೊಂಡು ಸ್ಪೀಕರ್ ಅವರನ್ನ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಈಗಿನ ರಾಜಕೀಯ ವಾತಾವಣರದಲ್ಲಿ ಬಲಾಢ್ಯರಿಗೆ, ಒತ್ತಡ ತಂತ್ರಗಳನ್ನು ಹೆಣೆಯುವವರಿಗೆ ಮನ್ನಣೆ ಇದೆ. ನಮ್ಮಂತಹ ಸೌಮ್ಯ ಸ್ವಭಾವದವರಿಗೆ ಯಾವುದೇ ಕೆಲಸಗಳಿಗೆ ಮನ್ನಣೆ ದೊರೆಯುತ್ತಿಲ್ಲ. ಕಾರಣ ನನ್ನ ಕ್ಷೇತ್ರದ ಜನರ ಅಶೆ, ಆಶೋತ್ತರಗಳಿಗೆ ಸ್ಪಂದಿಸಲು ಸಾಧ್ಯವಾಗದ ಕಾರಣ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅಸಮಾಧಾನ ಹೊರಹಾಕಿದ್ದಾರೆ.


Spread the love

About Laxminews 24x7

Check Also

SIR ಬಗ್ಗೆ ಚುನಾವಣಾ ಆಯೋಗದಲ್ಲಿ ಭಿನ್ನಮತವಿಲ್ಲ, ಎಲ್ಲಾ ನಿರ್ಧಾರಗಳೂ ಸರ್ವಾನುಮತದಿಂದ ಕೂಡಿವೆ: ಆಯೋಗ ಸ್ಪಷ್ಟನೆ

Spread the loveನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ಬಗ್ಗೆ ಚುನಾವಣಾ ಆಯೋಗದಲ್ಲಿ ಯಾವುದೇ ಭಿನ್ನಮತ ಇಲ್ಲ, ಎಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ