Breaking News

ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ: ಯಶವಂತರಾಯಗೌಡ ಪಾಟೀಲ

Spread the love

ಇಂಡಿ: ‘ಬಿಸಿಲು ಹೆಚ್ಚಾಗುತ್ತಿದೆ. ಬೇಸಿಗೆ ಆರಂಭಗೊಂಡಿದ್ದು ಪಟ್ಟಣವೂ ಸೇರಿದಂತೆ ಹಳ್ಳಿಗಳಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ’ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

ನಗರದಲ್ಲಿ ಕುಡಿಯುವ ನೀರಿನ ಕುರಿತು ಶನಿವಾರ ನಡೆದ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರೂ ಭೀಮಾ ನದಿಯಲ್ಲಿ ನೀರಿನ ಕೊರತೆ ಎದ್ದು ಕಾಣುತ್ತಿದೆ. ತಾಲ್ಲೂಕಿನಾದ್ಯಂತ ಅನೇಕ ಕೆರೆಗಳು ತುಂಬಲಾಗಿದೆ. ಶೇ55ರಿಂದ 60 ರಷ್ಟು ಕೆರೆಗಳಲ್ಲಿ ನೀರು ನಿಂತಿವೆ. ಮಹಾರಾಷ್ಟ್ರ ಸರ್ಕಾರ ಭೀಮಾನದಿಯಿಂದ ಕಳೆದ ಎರಡು ದಿನಗಳ ಹಿಂದೆ ಭೀಮಾನದಿಗೆ 4,100 ಕ್ಯೂಸೆಕ್ಸ್ ನೀರು ಬಿಡುಗಡೆಯಾಗಿದೆ. ಧೂಳಖೇಡ ಜಾಕವೇಲ್ ವೀಕ್ಷೆಣೆ ಮಾಡಿದ್ದೇನೆ ಎಂದ ಅವರು, ಬಹುತೇಕ ಕುಡಿಯುವ ನೀರಿನ ಸಮಸ್ಯೆ ಏದರಾಗದು’ ಎಂದರು.

ತಾಲ್ಲೂಕಿನ ಕೆರೆಗಳ ಭರ್ತಿ ಯಾವ ಕೆರೆಗೆ ನೀರಿನ ಪ್ರಮಾಣ ಎಷ್ಟು ಬೇಸಿಗೆಯಲ್ಲಿ ಯಾವ ಕೆರೆ ನೀರು ಬತ್ತುತ್ತದೆ ಎಂಬ ವಿಚಾರವಾಗಿ ಹಾಗೂ ಜಲಧಾರೆ ಯೋಜನೆ ಪ್ರಗತಿ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು.

‘ಕುಡಿಯುವ ನೀರಿನ ಸಮಸ್ಯೆಗೆ ಜಲಧಾರೆಯಿಂದ ಮಾತ್ರ ಪರಿಹಾರ ಸಾಧ್ಯ. ಅಧಿಕಾರಿಗಳು ಬೇಸಿಗೆ ಮುಗಿಯುವವರೆಗೂ ನೀರಿನ ಸಮಸ್ಯಯಾಗದಂತೆ ಕಾರ್ಯನಿರ್ವಹಿಸಬೇಕು’ ಎಂದರು.

ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.


Spread the love

About Laxminews 24x7

Check Also

ನರೇಗಾ ಬಚಾವ್ ಸಂಗ್ರಾಮ್ ಪ್ರತಿಭಟನೆ; ಕಾಂಗ್ರೆಸ್ ವತಿಯಿಂದ ವಿಜಯಪುರ ನಗರದಲ್ಲಿ ರ್ಯಾಲಿ

Spread the loveವಿಜಯಪುರ ನಗರ ಮತಕ್ಷೇತ್ರದ ನಗರ ಬ್ಲಾಕ್ ಕಾಂಗ್ರೆಸ್ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ‘ನರೇಗಾ ಬಚಾವ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ