ಸಿಯಾಟಲ್: ಅಮೆರಿಕದ ಸಿಯಾಟಲ್‌ನಲ್ಲಿ ವೇಗವಾಗಿ ಬಂದ ಪೊಲೀಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲ ಅವರ ಕುಟುಂಬಕ್ಕೆ ಸಿಯಾಟಲ್ ಸ್ಥಳೀಯಾಡಳಿತವು ಭಾರಿ ಮೊತ್ತದ ಪರಿಹಾರ ಘೋಷಿಸಿದೆ.
ಸುಮಾರು 29 ಮಿಲಿಯನ್ ಡಾಲರ್ (ಅಂದಾಜು 262 ಕೋಟಿ ರೂಪಾಯಿ) ಹಣವನ್ನು ರಾಜಿ ಒಪ್ಪಂದದ ಭಾಗವಾಗಿ ನೀಡಲು ಸ್ಥಳೀಯಾಡಳಿತ ಒಪ್ಪಿಕೊಂಡಿದೆ.
2023ರಲ್ಲಿ ಸಂಭವಿಸಿದ ಈ ದುರಂತ ಪ್ರಕರಣವು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ವಿಶೇಷವಾಗಿ ಭಾರತೀಯ ಮೂಲದ ವಿದ್ಯಾರ್ಥಿನಿಯ ಸಾವಿನ ಬಗ್ಗೆ ಅಮೆರಿಕದ ಪೊಲೀಸ್ ಅಧಿಕಾರಿಯೊಬ್ಬರು ಅಮಾನವೀಯವಾಗಿ ಮಾತನಾಡಿದ್ದ ವಿಡಿಯೋ ವೈರಲ್ ಆಗಿ ಭಾರತದ ರಾಜತಾಂತ್ರಿಕ ವಲಯದಲ್ಲೂ ಚರ್ಚೆಯಾಗಿತ್ತು.
ಈಶಾನ್ಯ ವಿಶ್ವವಿದ್ಯಾಲಯದ ಸಿಯಾಟಲ್ ಕ್ಯಾಂಪಸ್‌ನಲ್ಲಿ ಮಾಹಿತಿ ವ್ಯವಸ್ಥೆ ( ವಿಷಯದಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಜಾಹ್ನವಿ ಕಂದುಲ ಅವರು ರಸ್ತೆ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿತ್ತು. ಹಣವನ್ನು ರಾಜಿ ಒಪ್ಪಂದದ ಭಾಗವಾಗಿ ನೀಡಲು ಸ್ಥಳೀಯಾಡಳಿತ ಒಪ್ಪಿಕೊಂಡಿದೆ.
Laxmi News 24×7