Breaking News

ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ

Spread the love

ಶಿವಮೊಗ್ಗ: ನಗರದ ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ದೇಶದ 131 ನಗರಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಪ್ರಮುಖ ವಿಮಾನಯಾನ ಸಂಸ್ಥೆ ಇಂಡಿಗೋ  ಏಪ್ರಿಲ್ ಅಂತ್ಯಕ್ಕೆ ತನ್ನ ಸೇವೆಯನ್ನು ಸ್ಥಗಿತಗೊಳಿಸುವ ಮುನ್ಸೂಚನೆ ನೀಡಿದೆ.

ಮಾಹಿತಿಯ ಪ್ರಕಾರ, ಇಂಡಿಗೋ ಸಂಸ್ಥೆಯು ಏಪ್ರಿಲ್ 30ರ ವರೆಗಷ್ಟೇ ಟಿಕೆಟ್ ಕಾಯ್ದಿರಿಸಲು ಅವಕಾಶ ನೀಡಿದ್ದು, ಮೇ 1ರಿಂದ ಯಾವುದೇ ಬುಕ್ಕಿಂಗ್ ಲಭ್ಯವಿಲ್ಲ. ಇದು ಅಚ್ಚರಿಗೆ ಕಾರಣವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಕಾರಣವೇನು?
ಇತ್ತೀಚೆಗೆ ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದ ಹಿನ್ನೆಲೆ ಡಿಜಿಸಿಎ (DGCA) ವಿಮಾನಯಾನ ನಿಯಮಗಳನ್ನು ಅತ್ಯಂತ ಕಠಿಣಗೊಳಿಸಿದೆ. ಪೈಲಟ್‌ಗಳ ಕೆಲಸದ ಅವಧಿ ಮತ್ತು ವಿಮಾನಗಳ ನಿರ್ವಹಣೆಗೆ ಸಂಬಂಧಿಸಿದ ಹೊಸ ನಿಯಮಗಳಿಂದಾಗಿ ಇಂಡಿಗೋ ಸಂಸ್ಥೆಗೆ ಪೈಲಟ್‌ಗಳು ಕೊರತೆ ಎದುರಾಗಿದೆ. ಈ ತಾಂತ್ರಿಕ ಕಾರಣದಿಂದಾಗಿ ಸಂಸ್ಥೆಯು ಸಣ್ಣ ನಗರಗಳಿಗೆ ನೀಡುತ್ತಿದ್ದ ಎಟಿಆರ್ ವಿಮಾನ ಸೇವೆಗಳನ್ನು ಕಡಿತಗೊಳಿಸಲು ಮುಂದಾಗಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು

Spread the loveಶಿವಮೊಗ್ಗ: ಹಾವು ಕಡಿದು  2 ವರ್ಷದ ಮಗು  ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸಾಗರ ಪಟ್ಟಣದ ಎಸ್.ಎಸ್ ನಗರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ