Breaking News

ಬ್ಯಾಳಿ ಬಸವೇಶ್ವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ

Spread the love

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಶ್ರೀ ಬ್ಯಾಳಿ ಬಸವೇಶ್ವರ ದೇವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.

ಇಂದು ಜಡಿಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ದೊಡ್ಡವಾಡ ಇವರ ಸಾನ್ನಿಧ್ಯದಲ್ಲಿ ವಿವಿಧ ಪೂಜಾ ವಿಧಿವಿಧಾನಗಳೊಂದಿಗೆ ಬ್ಯಾಳಿ ಬಸವೇಶ್ವರ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು.
ಬಳಿಕ ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಇಂದು ರಾತ್ರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಇವರ ಸಹಯೋಗದಲ್ಲಿ ಶ್ರೀ ಕೃಷ್ಣ ಪಾರಿಜಾತ ನಾಟಕ ಹಮ್ಮಿಕೊಳ್ಳಲಾಗಿದೆ

ದೇವಸ್ಥಾನಕ್ಕೆ ಇವತ್ತಿನ ದಿನ ಕಿತ್ತೂರು ಕ್ಷೇತ್ರದ ಮಾಜಿ ಶಾಸಕರಾದ ಮಹಾಂತೇಶ್ ದೊಡ್ಡಗೌಡರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದುಕೊಂಡರು.

ಇದೇ ವೇಳೆ ದೇವಸ್ಥಾನ ಸಮಿತಿ ಹಾಗೂ ಗ್ರಾಮದ ಯುವಕರ ವತಿಯಿಂದ ಅವರಿಗೆ ಸನ್ಮಾನಿಸಲಾಯಿತು.


Spread the love

About Laxminews 24x7

Check Also

ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ

Spread the loveಬೆಳಗಾವಿ: ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಈಗಾಗಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ